ಅಫಜಲಪುರ: ತಾಲ್ಲೂಕಿನಲ್ಲಿ ಮಂಗಳವಾರ ಸಂಜೆ ಸುಮಾರು ಒಂದು ಗಂಟೆ ಕಾಲ ಸುರಿದ ಧಾರಾಕಾರ ಮಳೆಯಾಗಿದ್ದು ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿರುವ ಹತ್ತಿ, ತೊಗರಿ, ಉದ್ದು, ಹೆಸರು ಬೆಳೆಗಳಿಗೆ ಅನುಕೂಲವಾಗಿದೆ.
ಮಳೆ ಸ್ವಲ್ಪ ಕಡಿಮೆಯಾಗಿದ್ದರಿಂದ ರೈತರು ಆಕಾಶದತ್ತ ಮುಖ ಮಾಡಿದ್ದರು.
‘ಮಂಗಳವಾರ ಆರಿವ ಮಳೆಯಿಂದ ಬಹಳ ಅನುಕೂಲವಾಗಿದೆ. ಬಾಡುತ್ತಿದ್ದ ಬೆಳೆಗಳಿಗೆ ಜೀವ ಬಂದತಾಗಿದೆ. ವಾರಕ್ಕೆ ಒಮ್ಮೆಯಾದರೂ ಮಳೆ ಬರುತ್ತಿದ್ದರೆ ಬೆಳೆಗೆ ಅನುಕೂಲವಾಗುತ್ತದೆ, ಅಂತರ್ಜಲ ಮಟ್ಟ ಹೆಚ್ಚಳವಾಗುತ್ತದೆ’ ಎಂದು ರೈತ ಮುಖಂಡ ಮಾಶಾಳದ ಸಂತೋಷ್ ಗಂಜಿ, ಪಟ್ಟಣದ ಜಕ್ಕಪ್ಪ ಪೂಜಾರಿ, ಬಳ್ಳೂರಗಿ ಗ್ರಾಮದ ರೈತರದ ರೈತ ವಿಜಯಕುಮಾರ ಪಾಟೀಲ ತಿಳಿಸಿದರು.
‘ರೈತರು ಮಳೆ ಬರುವುದನ್ನೇ ಕಾಯುತ್ತಿದ್ದರು. ಇನ್ನೂ ಕೆಲವು ರೈತರು ಬಿತ್ತನೆ ಮಾಡಲು ಮಳೆಗಾಗಿ ಕಾಯುತ್ತಿದ್ದರು. ಎಲ್ಲರಿಗೂ ಮಳೆ ಅನುಕೂಲ ಮಾಡಿಕೊಟ್ಟಿದೆ’ ಎಂದು ಸಾಯಕ ಕೃಷಿ ನಿರ್ದೇಶಕ ಎಸ್.ಹೆಚ್.ಗಡಿಗಿಮನಿ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.