ಚಿಂಚೋಳಿ: ತಾಲ್ಲೂಕಿನಲ್ಲಿ ಗುರುವಾರ ಭಾರಿ ಮಳೆಯಿಂದ ನಾಗಾಈದಲಾಯಿ ಮತ್ತು ಕೊಳ್ಳೂರು ಗ್ರಾಮದಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿವೆ.
ದೇಗಲಮಡಿ ನಾಲಾ ತುಂಬಿ ಹರಿಯುತ್ತಿದೆ. ಮುಲ್ಲಾಮಾರಿ ನದಿಯಲ್ಲಿ ಪ್ರವಾಹ ಉಂಟಾಗಿದೆ. ನಾಗರಾಳ ಜಲಾಶಯಕ್ಕೆ ಒಳ ಹರಿವು ಹೆಚ್ಚಿದ್ದು ಸುಮಾರು 1100 ಕ್ಯುಸೆಕ್ ಒಳ ಹರಿವಿದೆ. ಜಲಾಶಯದಿಂದ ನದಿಗೆ 1500 ಕ್ಯುಸೆಕ್ ನೀರು ಬಿಡಲಾಗಿದೆ. ಸಧ್ಯ ಜಲಾಶಯದ ನೀರಿನ ಮಟ್ಟ 489.95 ಮೀಟರ್ ಇದೆ.
ತಾಲ್ಲೂಕಿನ ಚಂದ್ರಂಪಳ್ಳಿ ಜಲಾಶಯಕ್ಕೆ 921 ಕ್ಯುಸೆಕ್ ಒಳ ಹರಿವುದ್ದು 2500 ಕ್ಯುಸೆಕ್ ನೀರು ನದಿಗೆ ಬಿಡಲಾಗಿದೆ. ಜಲಾಶಯದ ನೀರಿನ ಮಟ್ಟ 1611 ಅಡಿ ಇದೆ.
ಕೊಳ್ಳೂರು ಗ್ರಾಮದಲ್ಲಿ ಮಳೆ ನೀರು ಪ್ರತಿ ವರ್ಷ ಮನೆಗಳಿಗೆ ನುಗ್ಗಿತ್ತಿದೆ ಹೀಗಾಗಿ ಶಾಶ್ವತ ಪರಿಹಾರ ಕಲ್ಪಿಸಬೇಕುಆಕಾಶ ಕೊಳ್ಳೂರು ಗ್ರಾಮಸ್ಥರ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.