ADVERTISEMENT

ಮಡಿಕೇರಿ: ಒಂದೇ ದಿನದಲ್ಲಿ ಚೆಂಬು ಗ್ರಾಮದಲ್ಲಿ 19 ಸೆಂ.ಮೀ ಮಳೆ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2022, 4:43 IST
Last Updated 4 ಆಗಸ್ಟ್ 2022, 4:43 IST
   

ಮಡಿಕೇರಿ: ಕೊಡಗು ಜಿಲ್ಲೆಯ ಕೆಲವೆಡೆ ಧಾರಾಕಾರ ಮಳೆ ಮುಂದುವರಿದಿದೆ. ಹವಾಮಾನ ಇಲಾಖೆ ಇಂದೂ ರೆಡ್ ಅಲರ್ಟ್ ಘೋಷಿಸಿದೆ‌.ಮಡಿಕೇರಿ ತಾಲ್ಲೂಕಿನ ಚೆಂಬು ಗ್ರಾಮದಲ್ಲಿ 19 ಸೆಂ.ಮೀನಷ್ಟು ಭಾರಿ ಮಳೆ ಸುರಿದಿದೆ.


'ಗುಡುಗು, ಸಿಡಿಲುಗಳಿಂದ ಕೂಡಿದ ಭಾರಿ ಮಳೆಗೆ ಕೆಲವು ಮನೆಗಳ ಸಮೀಪ ಮಣ್ಣು ಕುಸಿದಿದ್ದು ಅವರೆಲ್ಲರೂ ಸಂಬಂಧಿಕರ ಮನೆಗೆ ತೆರಳಿದ್ದಾರೆ.

ಮಳೆ ಇನ್ನೂ ಮುಂದುವರಿದಿದೆ. 2018ರಲ್ಲಿ ಈ ಪ್ರಮಾಣದ ಮಳೆ ಬಂದಿತ್ತು' ಎಂದು ಸ್ಥಳೀಯರು ತಿಳಿಸಿದ್ದಾರೆ‌.
ಭಾಗಮಂಡಲದಲ್ಲಿ ‌ 9, ಎಮ್ಮೆಮಾಡುವಿನಲ್ಲಿ 8, ಸೋಮವಾರಪೇಟೆಯ ಶಿರಂಗಾಲದಲ್ಲಿ 6 ಸೆಂ.ಮೀ ಮಳೆಯಾಗಿದೆ ಎಂದು ರಾಜ್ಯ ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರದ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.