ADVERTISEMENT

ಕಲಬುರಗಿ ಜಿಲ್ಲೆಯಾದ್ಯಂತ ಭಾರಿ ಮಳೆ: ಜಲಾಶಯದಿಂದ ನೀರು ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2024, 4:18 IST
Last Updated 1 ಸೆಪ್ಟೆಂಬರ್ 2024, 4:18 IST
   

ಕಲಬುರಗಿ: ಜಿಲ್ಲೆಯಾದ್ಯಂತ ಸತತ ಎರಡನೇ ದಿನವಾದ ಭಾನುವಾರವೂ ಭಾರಿ ಮಳೆ ಸುರಿಯುತ್ತಿದ್ದು, ಜಿಲ್ಲೆಯ ಚಂದ್ರಂಪಳ್ಳಿ, ಬೆಣ್ಣೆತೊರಾ ಜಲಾಶಯಗಳಿಂದ ನೀರನ್ನು ನದಿಗೆ ಹರಿಸಲಾಗುತ್ತಿದೆ.

ಕಾಳಗಿ ಪಟ್ಟಣದಲ್ಲಿ ರೌದ್ರಾವತಿ ನದಿ ಉಕ್ಕಿ ಹರಿಯುತ್ತಿದ್ದು, ನದಿ ಪಕ್ಕದ ನೀಲಕಂಠೇಶ್ವರ ದೇವಸ್ಥಾನದಲ್ಲಿ ನೀರು ನುಗ್ಗಿದೆ. ಇದರಿಂದ ದೈನಂದಿನ ಪೂಜೆ ಪುರಸ್ಕಾರ ಕಾರ್ಯಗಳಲ್ಲಿ ವ್ಯತ್ಯಯವಾಗಿದೆ.

ಕಲಬುರಗಿ ನಗರದಲ್ಲಿ ರಾತ್ರಿಯಿಂದಲೇ ಮಳೆ ಸುರಿಯುತ್ತಿರುವುದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.

ADVERTISEMENT

ಜಿಲ್ಲಾಡಳಿತ ಆರೆಂಜ್ ಅಲರ್ಟ್ ಘೋಷಿಸಿದೆ.

ಕಾಳಗಿ ತಾಲ್ಲೂಕಿನ ಹೇರೂರ ಬಳಿಯ ಬೆಣ್ಣೆತೊರಾ ಜಲಾಶಯದ ಒಳಹರಿವು ಹೆಚ್ಚಾಗಿರುವುದರಿಂದ, ಹೊರಹರಿವು 8000 ಕ್ಯುಸೆಕ್ ನಿಂದ 9200 ಕ್ಯುಸೆಕ್ ಗೆ ಹೆಚ್ಚಿಸಲಾಗಿದೆ.

ಅಫಜಲಪುರ ತಾಲ್ಲೂಕಿನ ದೇವಲಗಾಣಗಾಪುರ, ಘತ್ತರಗಾ ಸಮೀಪದಲ್ಲಿ ಭೀಮಾ ನದಿ ತುಂಬಿ ಹರಿಯುತ್ತಿರುವುದರಿಂದ ಸೇತುವೆ ಮೇಲಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.