ADVERTISEMENT

ಕಲಬುರ್ಗಿ: 43 ಡಿಗ್ರಿಗೆ ಏರಿದ ತಾಪಮಾನ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2020, 14:06 IST
Last Updated 24 ಏಪ್ರಿಲ್ 2020, 14:06 IST

ಕಲಬುರ್ಗಿ: ಜಿಲ್ಲೆಯಲ್ಲಿ ತಾಪಮಾನ ಹೆಚ್ಚುತ್ತಲೇ ಇದ್ದು,ಶುಕ್ರವಾರ ಗರಿಷ್ಠ 43 ಡಿಗ್ರಿ ಸೆಲ್ಸಿಯಸ್‌ ದಾಖಲಾಯಿತು. ಪ್ರಸಕ್ತ ಬೇಸಿಗೆಯ ಅತ್ಯಧಿಕ ತಾಪಮಾನ ಇದು.

ಬೆಳಿಗ್ಗೆ 8ರಿಂದಲೇ ಬಿಸಿಲಿನ ಅನುಭವ ಆರಂಭವಾಗುತ್ತಿದ್ದು, ಮಧ್ಯಾಹ್ನವಂತೂ ಪ್ರಖರತೆ ಹೆಚ್ಚಿರುತ್ತದೆ. ಕನಿಷ್ಠ ತಾಪಮಾನ 27 ಡಿಗ್ರಿ ಸೆ. ಇತ್ತು.

ರಾಯಚೂರು ಜಿಲ್ಲೆಯಲ್ಲಿ 42,ಕೊಪ್ಪಳ 39, ಯಾದಗಿರಿ 39 ಹಾಗೂ ಬೀದರ್ ಜಿಲ್ಲೆಯಲ್ಲಿ 38 ಡಿಗ್ರಿ ಸೆ. ತಾಪಮಾನ ಇತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.