ADVERTISEMENT

ಕಲಬುರಗಿ, ರಾಯಚೂರಿನಲ್ಲಿ ಅತ್ಯಧಿಕ ತಾಪಮಾನ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2025, 14:21 IST
Last Updated 18 ಮಾರ್ಚ್ 2025, 14:21 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಮತ್ತು ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 42.8 ಡಿಗ್ರಿ ಸೆಲ್ಸಿಯ್ಸ್ ದಾಖಲಾಗಿದೆ. ಮಂಗಳವಾರ ಬೆಳಿಗ್ಗೆ 8ಕ್ಕೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ದಾಖಲಾದ ಗರಿಷ್ಠ ಉಷ್ಣಾಂಶ ಇದು ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ.

ಕಲಬುರಗಿಯ ಕಾಳಗಿ ತಾಲ್ಲೂಕಿನ ಕೋಡ್ಲಿ ಹಾಗೂ ರಾಯಚೂರಿನ ಸಿರವಾರ ತಾಲ್ಲೂಕಿನ ಕಲ್ಲೂರು ಹೋಬಳಿಯಲ್ಲಿ ಗರಿಷ್ಠ ಉಷ್ಣಾಂಶ 42.8 ಡಿಗ್ರಿ ಸೆಲ್ಸಿಯ್ಸ್ ದಾಖಲಾಗಿದೆ. ಬೆಳಿಗ್ಗೆ 9 ಗಂಟೆ ಆಗುತ್ತಿದ್ದಂತೆ ಬಿಸಿಲಿನ ಪ್ರಕರತೆ ಹೆಚ್ಚಳವಾಗಿ ಮಧ್ಯಾಹ್ನ 12ರಿಂದ ಸಂಜೆ 5ರವರೆಗೆ ನೆಲ ಕಾದು ಕಾವಲಿಯಾಗುತ್ತಿದೆ.

ADVERTISEMENT

ಯಾದಗಿರಿ, ಬೀದರ್, ವಿಜಯಪುರ, ತುಮಕೂರು, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯ್ಸ್ ದಾಖಲಾಗಿದೆ ಎಂದು ಕೆಎಸ್‌ಎನ್‌ಡಿಎಂಸಿ ತಿಳಿಸಿದೆ.

ಮುಂದಿನ ಮೂರು ದಿನ ಉತ್ತರ ಮತ್ತು ದಕ್ಷಿಣ ಒಳನಾಡಿನಾದ್ಯಂತ ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗಲಿದೆ. ಮಾರ್ಚ್ 25ರವರೆಗೆ ಕೆಲವು ಜಿಲ್ಲೆಗಳಲ್ಲಿ ಬಿಸಿ ಮತ್ತು ತೇವಾಂಶದ ವಾತಾವರಣ ಕಂಡುಬರುವ ಸಾಧ್ಯತೆ ಇದೆ ಎಂದು ಐಎಂಡಿ ಮೂನ್ಸೂಚನೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.