ADVERTISEMENT

ಸುಟ್ಟ ಗಾಯಗಳ ಚಿಕಿತ್ಸೆ ಸೌಲಭ್ಯಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 19 ಮೇ 2022, 15:39 IST
Last Updated 19 ಮೇ 2022, 15:39 IST
ಶರಣಬಸಪ್ಪ ಪಪ್ಪಾ
ಶರಣಬಸಪ್ಪ ಪಪ್ಪಾ   

ಕಲಬುರಗಿ: ಬಿ.ಎಸ್‌. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬಜೆಟ್‌ನಲ್ಲಿ ಘೋಷಿಸಿದ್ದಂತೆ ಜಿಮ್ಸ್‌ ಆಸ್ಪತ್ರೆಯಲ್ಲಿ ಸುಟ್ಟ ಗಾಯಗಳ ಚಿಕಿತ್ಸೆ ಹಾಗೂ ಪ್ಲಾಸ್ಟಿಕ್ ಸರ್ಜರಿ ವಿಭಾಗ ಇನ್ನೂ ಆರಂಭವಾಗಿಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಈ ಚಿಕಿತ್ಸೆ ದುಬಾರಿ ವೆಚ್ಚ ತಗಲುವುದರಿಂದ ಕೂಡಲೇ ವಿಭಾಗಗಳನ್ನು ಆರಂಭಿಸಬೇಕು ಎಂದು ಹೈದರಾಬಾದ್ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಗೌರವ ಕಾರ್ಯದರ್ಶಿ ಶರಣಬಸಪ್ಪ ಎಂ. ಪಪ್ಪಾ ಒತ್ತಾಯಿಸಿದ್ದಾರೆ.

ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಪತ್ರ ಬರೆದಿರುವ ಅವರು, ‘ಕೆಕೆಆರ್‌ಡಿಬಿ ಅನುದಾನದಲ್ಲಿ ಸುಟ್ಟ ಗಾಯಗಳ ವಾರ್ಡ್ ಹಾಗೂ ಪ್ಲಾಸ್ಟಿಕ್ ಸರ್ಜರಿ ವಿಭಾಗವನ್ನು ಆರಂಭಿಸುವುದಾಗಿ ಘೋಷಿಸಿದ್ದರು. ಬೆಂಕಿ ಅವಘಡಗಳು ನಡೆದ ಸಂದರ್ಭದಲ್ಲಿ ಬಡ ರೋಗಿಗಳು ಬೇರೆ ನಗರಗಳಿಗೆ ಹೋಗಬೇಕಿದೆ. ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ವೆಚ್ಚವಾಗಲಿದೆ. ಇದನ್ನು ತಪ್ಪಿಸಲು ಜಿಮ್ಸ್‌ನಲ್ಲಿ ಈ ವಿಭಾಗಗಳನ್ನು ಆರಂಭಿಸಬೇಕು’ ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT