ADVERTISEMENT

ಹೋಳಿ ಹಬ್ಬ: ಕಲಬುರಗಿ ಜಿಲ್ಲೆಯಲ್ಲಿ ಮಾರ್ಚ್ 4ರವರೆಗೆ ಮದ್ಯ ಮಾರಾಟ ನಿಷೇಧ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2026, 4:59 IST
Last Updated 3 ಮಾರ್ಚ್ 2026, 4:59 IST
ಮದ್ಯ (ಪ್ರಾತಿನಿಧಿಕ ಚಿತ್ರ)
ಮದ್ಯ (ಪ್ರಾತಿನಿಧಿಕ ಚಿತ್ರ)   

ಕಲಬುರಗಿ: ಹೋಳಿ ಹಬ್ಬದ ಆಚರಣೆ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಶಾಂತತೆ ಕಾಪಾಡಲು ಜಿಲ್ಲೆಯಲ್ಲಿ ಮಾರ್ಚ್ 3ರ ಮಧ್ಯಾಹ್ನ 3 ಗಂಟೆಯಿಂದ ಮಾರ್ಚ್ 4ರ ರಾತ್ರಿ 12 ಗಂಟೆ ತನಕ ಜಿಲ್ಲೆಯಲ್ಲಿ ಸಂಪೂರ್ಣ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶಿಸಿದ್ದಾರೆ.

ಹೋಳಿ ಹಬ್ಬ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕರ್ನಾಟಕ ಅಬಕಾರಿ ಕಾಯ್ದೆ-1965ರ ಕಲಂ 21ರಂತೆ ಜಿಲ್ಲೆಯಾದ್ಯಂತ ಎಲ್ಲಾ ತರಹದ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸಿದಲ್ಲದೆ ಬಾರ್ ಮತ್ತು ರೆಸ್ಟೋರೆಂಟಗಳನ್ನು ಮುಚ್ಚುವಂತೆಯೂ ಆದೇಶದಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT