
ಕಲಬುರಗಿ: ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಹೊನ್ನಕಿರಣಗಿಯ ಚಂದ್ರಗುಂಡ ಶಿವಾಚಾರ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ತಾಲ್ಲೂಕಿನ ಹೊನ್ನಕಿರಣಗಿ ಶ್ರೀಮಠದಲ್ಲಿ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ಅಧ್ಯಕ್ಷರಾದ ಸಿಂದಗಿಯ ಪ್ರಭು ಸಾರಂಗದೇವ ಶಿವಾಚಾರ್ಯರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉಪಾಧ್ಯಕ್ಷ ಶ್ರೀನಿವಾಸ ಸರಡಗಿಯ ರೇವಣಸಿದ್ಧ ಶಿವಾಚಾರ್ಯರು, ಕೇಂದ್ರ ಕಾರ್ಯದರ್ಶಿ ಸ್ಟೇಷನ್ ಬಬಲಾದ ಶಿವಮೂರ್ತಿ ಶಿವಾಚಾರ್ಯರು ಉಪಸ್ಥಿತರಿದ್ದರು.
ಶಖಾಪುರ ತಪೋನವಮಠದ ಸಿದ್ಧರಾಮ ಶಿವಾಚಾರ್ಯರು, ಕಾರ್ಯದರ್ಶಿಯಾಗಿ ಪಾಳಾದ ಗುರುಮೂರ್ತಿ ಶಿವಾಚಾರ್ಯರು, ಸಹಕಾರ್ಯ ದರ್ಶಿಯಾಗಿ ಮಂಗಲಗಿ–ಟೆಂಗಳಿ ಶಾಂತಸೋಮನಾಥ ಶಿವಾಚಾರ್ಯರು ಅವಿರೋಧವಾಗಿ ಆಯ್ಕೆಯಾದರು.
ಹಾರಕೂಡ ಆಂದೋಲಾ, ಚೌದಾಪುರಿ, ಕಡಗಂಚಿ, ತೊನಸಳ್ಳಿ ಶ್ರೀಗಳು ಸೇರಿ ಇತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.