ADVERTISEMENT

ಕಲಬುರಗಿ | ಮರ್ಯಾದೆಗೇಡು ಹತ್ಯೆಗಳು ನಿಲ್ಲಲಿ: ತುಳಜರಾಮ ಎನ್‌.ಕೆ

​ಪ್ರಜಾವಾಣಿ ವಾರ್ತೆ
Published 4 ಜನವರಿ 2026, 7:56 IST
Last Updated 4 ಜನವರಿ 2026, 7:56 IST
ಕಲಬುರಗಿಯ ಎಐಡಿಎಸ್‌ಒ ಕಚೇರಿಯಲ್ಲಿ ಶನಿವಾರ ಸಾವಿತ್ರಿಬಾಯಿ ಫುಲೆ ಜಯಂತಿ ಕಾರ್ಯಕ್ರಮ ನಡೆಯಿತು
ಕಲಬುರಗಿಯ ಎಐಡಿಎಸ್‌ಒ ಕಚೇರಿಯಲ್ಲಿ ಶನಿವಾರ ಸಾವಿತ್ರಿಬಾಯಿ ಫುಲೆ ಜಯಂತಿ ಕಾರ್ಯಕ್ರಮ ನಡೆಯಿತು   

ಕಲಬುರಗಿ: ಮರ್ಯಾದೆ ಹೀನ ಹತ್ಯೆಗಳು ಹಾಗೂ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳು ಅಂತ್ಯವಾಗಬೇಕು ಎಂದು ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆಯ ಜಿಲ್ಲಾಧ್ಯಕ್ಷ ತುಳಜರಾಮ ಎನ್‌.ಕೆ. ಹೇಳಿದರು.

ನಗರದ ಸಂಘಟನೆ ಕಚೇರಿಯಲ್ಲಿ ‘ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ರಾಜ್ಯದ 40,000 ಸರ್ಕಾರಿ ಶಾಲೆಗಳ ಮುಚ್ಚುವಿಕೆ ವಿರೋಧಿಸಿ ಪ್ರತಿರೋಧ ದಿನ’ವಾಗಿ ಶನಿವಾರ ನಡೆದ ಸಾವಿತ್ರಿಬಾಯಿ ಫುಲೆ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಸಮಾಜದಲ್ಲಿ ಅನೇಕ ಸಾಮಾಜಿಕ ಪಿಡುಗುಗಳು ತಾಂಡವವಾಡುತ್ತಿದ್ದು, ಮರ್ಯಾದೆಗೇಡು ಹತ್ಯೆ ಅಂತಹ ಪ್ರಕರಣಗಳು ಪತ್ರಿಕೆಗಳಲ್ಲಿ ವರದಿಯಾಗುತ್ತಲೇ ಇವೆ. ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ನಡೆದ ಘಟನೆ ಹಾಗೂ ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆದ ಘಟನೆ ಇದಕ್ಕೆ ಸಾಕ್ಷಿಯಾಗಿವೆ. ಸಮಾಜದಲ್ಲಿ ಈ ರೀತಿಯ ಮರ್ಯಾದೆ ಹೀನ ಹತ್ಯೆಗಳು ಕೊನೆಯಾಗಬೇಕು, ಜಾತಿ- ಧರ್ಮ ಎಲ್ಲದಕ್ಕಿಂತ ಮಾನವೀಯತೆಯೇ ಮಿಗಿಲು ಅನ್ನುವುದು ಪ್ರತಿಯೊಬ್ಬರಿಗೂ ಮನದಟ್ಟಾಗಬೇಕು’ ಎಂದರು.

ADVERTISEMENT

ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳು ದಿನೇ ದಿನೇ ಹೆಚ್ಚುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಎಐಡಿಎಸ್ಒ ಜಿಲ್ಲಾ ಕೌನ್ಸಿಲ್ ಕಾರ್ಯದರ್ಶಿ ವೆಂಕಟೇಶ ದೇವದುರ್ಗ, ಉಪಾಧ್ಯಕ್ಷರಾದ ಪ್ರೀತಿ ದೊಡ್ಡಮನಿ, ಗೋವಿಂದ ಯಳವರ, ಸದಸ್ಯರಾದ ರಾಹುಲ್ ಜಾಧವ್, ಯುವರಾಜ್ ರಾಠೋಡ ಇನ್ನಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.