ADVERTISEMENT

ಶಿಕ್ಷಕ ರಾಜಶೇಖರ ಹೊಕ್ರಾಣಿಗೆ ಉತ್ತಮ ಶಿಕ್ಷಕ ಪ್ರಶಸ್ತಿ

ಪ್ರೌಢ ಶಾಲಾ ಶಿಕ್ಷಕ ಸಂಘದಿಂದ ಪ್ರದಾನ 

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2024, 16:23 IST
Last Updated 14 ಸೆಪ್ಟೆಂಬರ್ 2024, 16:23 IST
ಚಿಂಚೋಳಿ ತಾಲ್ಲೂಕು ಕನಕಪುರ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ರಾಜಶೇಖರ ಹೊಕ್ರಾಣಿ ಅವರಿಗೆ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು
ಚಿಂಚೋಳಿ ತಾಲ್ಲೂಕು ಕನಕಪುರ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ರಾಜಶೇಖರ ಹೊಕ್ರಾಣಿ ಅವರಿಗೆ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು    

ಚಿಂಚೋಳಿ: ತಾಲ್ಲೂಕಿನ ಕನಕಪುರ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ರಾಜಶೇಖರ ಹೊಕ್ರಾಣಿ ಅವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಕಲಬುರಗಿ ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ 2024-25ನೇ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಈಚೆಗೆ ಕಲಬುರಗಿಯ ಪಿಡಿಎ ಎಂಜಿನಿಯರಿಂಗ್ ಕಾಲೇಜಿನ ನ್ಯಾಕ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು.

‘2022-23ನೇ ಸಾಲಿನ ಕಲ್ಯಾಣ ಕರ್ನಾಟಕ ಶಿಕ್ಷಕ ರತ್ನ ಪ್ರಶಸ್ತಿ ಮುಡಿಗೇರಿಸಿಕೊಂಡ ರಾಜಶೇಖರ ಅವರು ಫಲಿತಾಂಶ ಸುಧಾರಣೆ ಜತೆಗೆ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸಲು ಶ್ರಮಿಸುತ್ತಿದ್ದಾರೆ’ ಎಂದು ಪ್ರೌಢಶಾಲೆ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಖುರ್ಷಿದ್ ಮಿಯಾ, ಕಾರ್ಯದರ್ಶಿ ಕಿಶನ ನಿಟ್ಟೂರಕರ್ ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.