ADVERTISEMENT

ಜೇವರ್ಗಿ: ಮೇ 26ರಂದು ಸಾಧಕರಿಗೆ ಸನ್ಮಾನ ಹಾಗೂ ವಾರ್ಷಿಕ ಸ್ನೇಹ ಸಮ್ಮೇಳನ

​ಪ್ರಜಾವಾಣಿ ವಾರ್ತೆ
Published 25 ಮೇ 2025, 12:41 IST
Last Updated 25 ಮೇ 2025, 12:41 IST
ಧರ್ಮಣ್ಣ ಬಡಿಗೇರ
ಧರ್ಮಣ್ಣ ಬಡಿಗೇರ   

ಜೇವರ್ಗಿ: ಪಟ್ಟಣದ ಶ್ರೀ ಮಹಾಲಕ್ಷ್ಮಿ ಮಹಿಳಾ ಪದವಿ ಮಹಾವಿದ್ಯಾಲಯ ಹಾಗೂ ಶ್ರೀ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಮೇ 26ರಂದು ಸಾಧಕರಿಗೆ ಸನ್ಮಾನ ಹಾಗೂ ವಾರ್ಷಿಕ ಸ್ನೇಹ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಚಾರ್ಯ ಧರ್ಮಣ್ಣ ಬಡಿಗೇರ ತಿಳಿಸಿದ್ದಾರೆ.

ಬೆಳಗಾವಿ ಮುಕ್ತಿ ಮಠದ ಶಿವಸಿದ್ದ ಸೋಮೇಶ್ವರ ಸ್ವಾಮೀಜಿ ಮತ್ತಿತರ ಶ್ರೀಗಳು ಸಮ್ಮುಖ ವಹಿಸುವರು.

ಜಿ.ಪಂ ವಿರೋಧ ಪಕ್ಷದ ಮಾಜಿ ನಾಯಕ ಬಸವರಾಜ ಪಾಟೀಲ್ ನರಿಬೋಳ ಸಮಾರಂಭ ಉದ್ಘಾಟಿಸಲಿದ್ದು, ಹಲವರು ಭಾಗವಹಿಸುವರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ‘ಆಧ್ಯಾತ್ಮ ಜ್ಯೋತಿ’ ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.