ADVERTISEMENT

ಅಪಘಾತ: ಹೊತ್ತಿ ಉರಿದ ಬೈಕ್, ಸವಾರನ ದೇಹ

​ಪ್ರಜಾವಾಣಿ ವಾರ್ತೆ
Published 24 ಮೇ 2025, 16:14 IST
Last Updated 24 ಮೇ 2025, 16:14 IST
ಕಲಬುರಗಿ ಜಿಲ್ಲೆ ಕಾಳಗಿ ತಾಲ್ಲೂಕಿನ ಕಾಳಗಿ–ಕೊಡದೂರು ರಸ್ತೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಹೊತ್ತಿ ಉರಿದ ಬೈಕ್‌ಗಳು
ಕಲಬುರಗಿ ಜಿಲ್ಲೆ ಕಾಳಗಿ ತಾಲ್ಲೂಕಿನ ಕಾಳಗಿ–ಕೊಡದೂರು ರಸ್ತೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಹೊತ್ತಿ ಉರಿದ ಬೈಕ್‌ಗಳು   

ಕಾಳಗಿ (ಕಲಬುರಗಿ ಜಿಲ್ಲೆ): ಎರಡು ಬೈಕ್‌ಗಳು ಪರಸ್ಪರ ಭೀಕರ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿರುವ ಘಟನೆ ಶನಿವಾರ ಸಂಜೆ ಕಾಳಗಿ–ಕೊಡದೂರ ಮುಖ್ಯರಸ್ತೆಯಲ್ಲಿ ಸಂಭವಿಸಿದೆ.

ತಾಲ್ಲೂಕಿನ ಮಂಗಲಗಿ ಗ್ರಾಮದ ದಶರಥ ಪೀರಪ್ಪ ಮಡಿವಾಳ (28) ಮೃತಪಟ್ಟ ಸವಾರ. ಅವರ ದೇಹ ಬೆಂಕಿಗೆ ಸುಟ್ಟು ಕರಕಲಾಗಿದೆ. ಸಾಸರಗಾಂವ ಗ್ರಾಮದ ಮಲ್ಲಪ್ಪ ಅಣ್ಣಪ್ಪ ಪೂಜಾರಿ (35), ಅವಿನಾಶ ಮಲ್ಲಪ್ಪ (2) ಗಾಯಗೊಂಡಿದ್ದಾರೆ.

ಮೃತ ದಶರಥ ಅವರ ಬೈಕ್ ಕಾಳಗಿ ಕಡೆಯಿಂದ ಮಂಗಲಗಿ ಕಡೆಗೆ ಹಾಗೂ ಮಲ್ಲಪ್ಪ ಅವರ ಬೈಕ್ ಕೊಡದೂರ ಕಡೆಯಿಂದ ಕಾಳಗಿ ಕಡೆಗೆ ಬರುತ್ತಿತ್ತು. ಮಾರ್ಗಮಧ್ಯೆ ಡಿಕ್ಕಿ ಸಂಭವಿಸಿ ಬೆಂಕಿ ಹೊತ್ತಿಕೊಂಡಿದೆ. ದಶರಥ ಸಾವನ್ನಪ್ಪಿದರೆ, ಇನ್ನೊಂದು ಬೈಕಿನಲ್ಲಿದ್ದ ಅವಿನಾಶ ಮತ್ತು ಮಲ್ಲಪ್ಪ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಕಾಳಗಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಕಲಬುರಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ADVERTISEMENT

ಕಾಳಗಿ ಸಿಪಿಐ ಜಗದೇವಪ್ಪ ಪಾಳಾ, ಪಿಎಸ್ಐ ತಿಮ್ಮಯ್ಯ ಬಿ.ಕೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಕುರಿತು ಕಾಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.