ADVERTISEMENT

ಜಿಮ್ಸ್‌ನ 500 ಹಾಸಿಗೆಯ ಕೋವಿಡ್ ಕೇರ್ ಸೆಂಟರ್ ಕಾರ್ಯಾರಂಭ

​ಪ್ರಜಾವಾಣಿ ವಾರ್ತೆ
Published 21 ಮೇ 2021, 6:51 IST
Last Updated 21 ಮೇ 2021, 6:51 IST
ಕಲಬುರ್ಗಿಯ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಹಾಸ್ಟೆಲಿನ ಹೊಸ ಕಟ್ಟಡದಲ್ಲಿ ಆರಂಭಿಸಿದ 500 ಹಾಸಿಗೆಗಳ ಕೋವಿಡ್ ಆರೈಕೆ ಕೇಂದ್ರವನ್ನು ಅಧಿಕಾರಿಗಳು ಶುಕ್ರವಾರ ಪರಿಶೀಲೀಸಿದರು.
ಕಲಬುರ್ಗಿಯ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಹಾಸ್ಟೆಲಿನ ಹೊಸ ಕಟ್ಟಡದಲ್ಲಿ ಆರಂಭಿಸಿದ 500 ಹಾಸಿಗೆಗಳ ಕೋವಿಡ್ ಆರೈಕೆ ಕೇಂದ್ರವನ್ನು ಅಧಿಕಾರಿಗಳು ಶುಕ್ರವಾರ ಪರಿಶೀಲೀಸಿದರು.   

ಕಲಬುರ್ಗಿ: ಕಡಿಮೆ ಲಕ್ಷಣಗಳಿರುವ ಸೋಂಕಿತರಿಗೆ ಚಿಕಿತ್ಸೆ ನೀಡಲು ನಗರದ ಅನ್ನಪೂರ್ಣ ಕ್ರಾಸ್ ಬಳಿಯ ಸಮಾಜ‌ ಕಲ್ಯಾಣ ಇಲಾಖೆಯ 500 ಹಾಸಿಗೆ ಸಾಮರ್ಥ್ಯದ ವಸತಿ ನಿಲಯವನ್ನು ಜಿಮ್ಸ್ ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಲಾಗಿದ್ದು, ಶುಕ್ರವಾರದಿಂದ ಕಾರ್ಯಾರಂಭ ಮಾಡಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶರಣಬಸಪ್ಪ ಗಣಜಲಖೇಡ ತಿಳಿಸಿದರು.

ಶುಕ್ರವಾರ ಅವರು ಕೋವಿಡ್ ಕೇರ್‌ ಸೆಂಟರ್‌ಗೆ ಭೇಟಿ ನೀಡಿ ಮಾತನಾಡಿದರು.

500 ಹಾಸಿಗೆ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್‌ನಲ್ಲಿ ಸದ್ಯ 50 ಬೆಡ್‌ಗಳು ಕಾರ್ಯ ನಿರ್ವಹಿಸುತ್ತಿವೆ. ಮುಂದೆ ರೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದಲ್ಲಿ ಅದಕ್ಕನುಗುಣವಾಗಿ ಹಾಸಿಗೆಯನ್ನು ಹೆಚ್ಚಿಸಲಾಗುವುದು ಎಂದರು.

ADVERTISEMENT

36 ಆಮ್ಲಜನಕ ಕಾನ್ಸಂಟ್ರೇಟರ್‌ಗಳಿದ್ದು, ಉಸಿರಾಟ‌ ಸಮಸ್ಯೆ ಇರುವ ರೋಗಿಗಳಿಗೆ ಇದು ನೆರವಾಗಲಿದೆ. ಓರ್ವ ಫಾರ್ಮಾಸಿಸ್ಟ್ ಸಹ ನಿಯೋಜಿಸಿದೆ. ಅಗತ್ಯ ಔಷಧಿಗಳು ಸ್ಥಳದಲ್ಲಿಯೆ ಲಭ್ಯವಿರಲಿವೆ ಎಂದರು.

ಕೋವಿಡ್ ಸೋಂಕಿತರಿಗೆ ದಿನದ 24 ಗಂಟೆ ಚಿಕಿತ್ಸೆ ನೀಡಲು 3 ಪಾಳಿಯಲ್ಲಿ ಒಟ್ಟು 3 ಎಂ.ಬಿ.ಬಿ.ಎಸ್ ವೈದ್ಯರು, 6 ಸ್ಟಾಫ್ ನರ್ಸ್, 6 ಗ್ರೂಪ್ ಡಿ ನೌಕರರನ್ನು‌ ನಿಯೋಜಿಸಲಾಗಿದೆ. ಜಿಲ್ಲಾಡಳಿತದಿಂದಲೇ ರೋಗಿಗಳಿಗೆ ಊಟದ ವ್ಯವಸ್ಥೆ ಮಾಡಲಾಗುತ್ತದೆ. ತುರ್ತು ಸಂದರ್ಭದಲ್ಲಿ ಉಪಯೋಗಕ್ಕೆ ಆಂಬುಲೆನ್ಸ್ ಸಹ ಲಭ್ಯವಿರಲಿದೆ ಎಂದು ಡಾ.ಶರಣಬಸಪ್ಪ ವಿವರಿಸಿದರು.

ಇದೇ ವೇಳೆ ಆಮ್ಲಜನಕ ಕಾನ್ಸಂಟ್ರೇಟರ್ ಯಾವ ರೀತಿಯಾಗಿ ಕಾರ್ಯನಿರ್ವಹಿಸುತ್ತವೆ ಎಂದು ಅವರು ಪ್ರಾಯೋಗಿಕವಾಗಿ ತೋರಿಸಿಕೊಟ್ಟರು.

ಡಾ.ಶರಣಬಸಪ್ಪ ಕ್ಯಾತನಾಳ ಹಾಗೂ ತಾಲ್ಲೂಕು ಅರೋಗ್ಯಧಿಕಾರಿ ಡಾ. ಮಾರುತಿ ಕಾಂಬಳೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.