ಕಲಬುರಗಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಕಾಶವಾಣಿ ರೇಡಿಯೊ ಕಾರ್ಯಕ್ರಮದ ಮನ್ ಕಿ ಬಾತ್‌ನ 125ನೇ ಸಂಚಿಕೆಯಲ್ಲಿ ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟವನ್ನು ಸ್ಮರಿಸಿದ್ದಾರೆ.
ಹೈದರಾಬಾದ್ ನಿಜಾಮರ ಆಳ್ವಿಕೆಗೆ ಒಳಪಟ್ಟಿದ್ದ ಪ್ರದೇಶಗಳ ವಿಮೋಚನೆಗಾಗಿ ಹೋರಾಡಿದ ಅಂದಿನ ಹೋರಾಟಗಾರರ ತ್ಯಾಗ, ಬಲಿದಾನವನ್ನು ಸ್ಮರಿಸಿದ ಪ್ರಧಾನಿ, ಅಂದಿನ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ತೋರಿದ ಕಠಿಣ ನಿರ್ಧಾರ, ಕಾನೂನು ಸಚಿವರಾಗಿದ್ದ ಡಾ. ಬಿ.ಆರ್ ಅಂಬೇಡ್ಕರ್ ಅವರ ಮಹತ್ವದ ಸಲಹೆ ಮತ್ತು ಆಪರೇಷನ್ ಪೋಲೊ ಸಮಯದಲ್ಲಿ ಮಿಲಿಟರಿ ಪಡೆಗಳು ತೋರಿದ ಧೈರ್ಯವನ್ನು ಮೆಲುಕು ಹಾಕಿದರು.
ಇದೇ ವೇಳೆ ಅಂದು ಆಪರೇಷನ್ ಪೋಲೊ ಕುರಿತು ಮಾತನಾಡಿದ್ದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲರ ಆಡಿಯೊವನ್ನು ಹಂಚಿಕೊಂಡರು. ಸೆಪ್ಟೆಂಬರ್ 17 ಅನ್ನು ಹೈದರಾಬಾದ್ ವಿಮೋಚನಾ ದಿನವನ್ನಾಗಿ ಆಚರಿಸುವ ನಮ್ಮ ಸರ್ಕಾರದ ನಿರ್ಧಾರವನ್ನು ವಿಶೇಷವಾಗಿ ತೆಲಂಗಾಣ, ಕರ್ನಾಟಕ ಮತ್ತು ಮಹಾರಾಷ್ಟ್ರದ ಜನರು ಬಹಳವಾಗಿ ಮೆಚ್ಚಿಕೊಂಡಿದ್ದಾರೆ ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.