ADVERTISEMENT

ಕಲ್ಯಾಣ ಕರ್ನಾಟಕ ‌ಪ್ರದೇಶ ಅಭಿವೃದ್ಧಿ ‌ಮಂಡಳಿ ಕಾರ್ಯದರ್ಶಿಯಾಗಿ ಅನಿರುದ್ಧ ಶ್ರವಣ್

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2022, 11:30 IST
Last Updated 14 ನವೆಂಬರ್ 2022, 11:30 IST
ಅನಿರುದ್ಧ ಶ್ರವಣ್ ಪಿ
ಅನಿರುದ್ಧ ಶ್ರವಣ್ ಪಿ   

ಕಲಬುರಗಿ: ಕಲ್ಯಾಣ ಕರ್ನಾಟಕ ‌ಪ್ರದೇಶ ಅಭಿವೃದ್ಧಿ ‌ಮಂಡಳಿ (ಕೆಕೆಆರ್ ಡಿಬಿ) ಕಾರ್ಯದರ್ಶಿಯನ್ನಾಗಿ ಹಿರಿಯ ಐಎಎಸ್‌ ಅಧಿಕಾರಿ ಅನಿರುದ್ಧ ಶ್ರವಣ್ ಪಿ.‌ ಅವರನ್ನು ನೇಮಕ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.

ವಿಜಯನಗರ ಜಿಲ್ಲೆಯ ಮೊದಲ ಜಿಲ್ಲಾಧಿಕಾರಿಯಾಗಿದ್ದ ಅನಿರುದ್ಧ ಶ್ರವಣ್ ಅವರನ್ನು ಸರ್ಕಾರ ಇತ್ತೀಚೆಗೆ ವರ್ಗಾವಣೆಗೊಳಿಸಿತ್ತು. ಆದರೆ ಹುದ್ದೆ ತೋರಿಸಿರಲಿಲ್ಲ. ಇದೀಗ ಕೆಕೆಆರ್ ಡಿಬಿ ಕಾರ್ಯದರ್ಶಿ ಸ್ಥಾನದಂತಹ ಮಹತ್ವದ ಹುದ್ದೆ ನೀಡಿದೆ.

ಅನಿರುದ್ಧ ಶ್ರವಣ್ ಅವರು ಕೆಲ ವರ್ಷಗಳ ಹಿಂದೆ ಕಲಬುರಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಾರ್ಯ ನಿರ್ವಹಿಸಿದ್ದರು. ಆ ಸಂದರ್ಭದಲ್ಲಿ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಪರಿಣಾಮಕಾರಿ ಅನುಷ್ಠಾನದಿಂದಾಗಿ ಜನಾನುರಾಗಿಯಾಗಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.