ADVERTISEMENT

ಭನ್ವರ್ ಸಿಂಗ್ ಮೀನಾ ಕಲಬುರಗಿ ಜಿಲ್ಲಾ ಪಂಚಾಯಿತಿ ನೂತನ ಸಿಇಒ

​ಪ್ರಜಾವಾಣಿ ವಾರ್ತೆ
Published 19 ಜೂನ್ 2023, 16:08 IST
Last Updated 19 ಜೂನ್ 2023, 16:08 IST
   

ಕಲಬುರಗಿ: 2017ನೇ ವೃಂದದ ಐಎಎಸ್ ಅಧಿಕಾರಿ ಭನ್ವರ್ ಸಿಂಗ್ ಮೀನಾ ಅವರನ್ನು ಕಲಬುರಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನಾಗಿ ವರ್ಗಾವಣೆಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.

ಭನ್ವರ್ ಸಿಂಗ್ ಅವರು ಕೃಷ್ಣಾ ಮೇ‌ಲ್ದಂಡೆ ಯೋಜನೆಯ ಪುನರ್ವಸತಿ, ಭೂಸ್ವಾಧೀನ ವಿಭಾಗದ ಪ್ರಧಾನ ವ್ಯವಸ್ಥಾಪಕರಾಗಿದ್ದರು. ಇದಕ್ಕೂ ಮುನ್ನ ಕೊಡಗು ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದರು.

ಸಿಇಒ ಆಗಿದ್ದ ಡಾ. ಗಿರೀಶ್ ಡಿ. ಬದೋಲೆ ಅವರನ್ನು ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷಾ ನಿಯಂತ್ರಕರ ಹುದ್ದೆಗೆ ವರ್ಗಾಯಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.