ಕಲಬುರಗಿ: 2018ನೇ ವೃಂದದ ಐಎಎಸ್ ಅಧಿಕಾರಿ ಡಾ.ಗಿರೀಶ್ ದಿಲೀಪ್ ಬದೋಲೆ ಅವರನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನಾಗಿ ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಗುರುವಾರ ಆದೇಶ ಹೊರಡಿಸಿದೆ.
ಡಾ.ಗಿರೀಶ್ ಅವರು ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ಉಪವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಜಿ.ಪಂ. ಸಿಇಒ ಡಾ. ದಿಲೀಷ್ ಶಶಿ ಅವರನ್ನು ಬೆಂಗಳೂರಿನ ಇ ಆಡಳಿತ ವಿಭಾಗದ ಎಲೆಕ್ಟ್ರಾನಿಕ್ ಡೆಲಿವರಿ ಸಿಟಿಜನ್ ಸರ್ವಿಸಸ್‌ನ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.