ADVERTISEMENT

ಕಲಬುರಗಿಯಲ್ಲಿ ಅಕ್ರಮ ಮನೆಗಳ ತೆರವು ಕಾರ್ಯಾಚರಣೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2022, 6:37 IST
Last Updated 19 ಜೂನ್ 2022, 6:37 IST
ಅಕ್ರಮ ಮನೆಗಳ ತೆರವು ಕಾರ್ಯಾಚರಣೆ
ಅಕ್ರಮ ಮನೆಗಳ ತೆರವು ಕಾರ್ಯಾಚರಣೆ   

ಕಲಬುರಗಿ: ನಗರದ ಹೊರವಲಯದ ಜಾಫರಾಬಾದ್ ಬಡಾವಣೆಯಲ್ಲಿ ಅಕ್ರಮವಾಗಿ ಮನೆ, ಅಂಗಡಿಗಳನ್ನು ನೆಲಸಮ ಮಾಡುವ ಕಾರ್ಯಾಚರಣೆಯನ್ನು ಮಹಾನಗರ ಪಾಲಿಕೆ ಅಧಿಕಾರಿಗಳು ಬೆಳಿಗ್ಗೆಯಿಂದಲೇ ಆರಂಭಿಸಿದ್ದಾರೆ.

ಹಲವು‌ ಬಾರಿ ಮನೆಗಳನ್ನು ತೆರವುಗೊಳಿಸುವಂತೆ ನೋಟಿಸ್ ನೀಡಲಾಗಿತ್ತು. ಆದರೂ, ತೆರವು ಮಾಡದ ಹಿನ್ನೆಲೆಯಲ್ಲಿ ಬುಲ್ಡೋಜರ್ ಮನೆಗಳನ್ನು ನೆಲಸಮಗೊಳಿಸಲಾಗುತ್ತಿದೆ.

ಮಹಾನಗರ ಪಾಲಿಕೆಯು ಸಾರ್ವಜನಿಕ ಆಸ್ತಿ ಮರುವಶಕ್ಕೆ ಪಡೆಯುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಟ್ಟಿದ್ದು, ಇತ್ತೀಚೆಗೆ ರಾಮಮಂದಿರ ವೃತ್ತದ ಬಳಿಯೂ ರಸ್ತೆ ಅತಿಕ್ರಮಿಸಿಕೊಂಡಿದ್ದ ಅಂಗಡಿಗಳನ್ನು ತೆರವುಗೊಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.