ADVERTISEMENT

ಆಳಂದ: ಧರ್ಮಸ್ಥಳ ಸಂಘದ ಹೊಸ ಕಚೇರಿ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 10 ಜನವರಿ 2022, 5:58 IST
Last Updated 10 ಜನವರಿ 2022, 5:58 IST
ಆಳಂದದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ನೂತನ ಕಚೇರಿ ಉದ್ಘಾಟಿಸಿ ಶಾಸಕ ಸುಭಾಷ ಗುತ್ತೇದಾರ ಮಾತನಾಡಿದರು. ರಾಜಶ್ರೀ ಖಜೂರಿ, ಶಿವರಾಯ ಪ್ರಭು ಇದ್ದರು
ಆಳಂದದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ನೂತನ ಕಚೇರಿ ಉದ್ಘಾಟಿಸಿ ಶಾಸಕ ಸುಭಾಷ ಗುತ್ತೇದಾರ ಮಾತನಾಡಿದರು. ರಾಜಶ್ರೀ ಖಜೂರಿ, ಶಿವರಾಯ ಪ್ರಭು ಇದ್ದರು   

ಆಳಂದ: ‘ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯು ನಿರಂತರವಾಗಿ ತಾಲ್ಲೂಕಿನಲ್ಲಿ ಜನಮುಖಿಯಾದ ಸೇವಾ ಕಾರ್ಯ ಕೈಗೊಳ್ಳುತ್ತಿರುವುದು ಶ್ಲಾಘನೀಯ’ ಎಂದು ಶಾಸಕ ಸುಭಾಷ ಗುತ್ತೇದಾರ ತಿಳಿಸಿದರು.

ಪಟ್ಟಣದ ಜೈನಬಸದಿಯಲ್ಲಿ ಶನಿವಾರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದರು.

ಪರಿಸರ ಸಂರಕ್ಷಣೆ, ಸ್ವಚ್ಛತೆ, ಕೆರೆಗಳ ಸ್ವಚ್ಛತೆ ಜತೆಗೆ ಮಹಿಳಾ ಸಂಘಗಳ ಮೂಲಕ ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಮಾಡುವಲ್ಲಿ ಧರ್ಮಸ್ಥಳ ಸಂಸ್ಥೆಗೆ ಅಗತ್ಯ ಸಹಕಾರ ನೀಡುವ ಭರವಸೆ ನೀಡಿದರು.

ADVERTISEMENT

ಧರ್ಮಸ್ಥಳ ಸಂಸ್ಥೆ ಪ್ರಾದೇಶಿಕ ನಿರ್ದೇಶಕ ಶಿವರಾಯ ಪ್ರಭು ಮಾತನಾಡಿ ತಾಲ್ಲೂಕಿನ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ 7 ವಲಯಗಳಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಕಾರ್ಯ ಚಟುವಟಿಕೆಗಳು ನಡೆಯುತ್ತಿವೆ ಎಂದರು.

ಪುರಸಭೆ ಅಧ್ಯಕ್ಷೆ ರಾಜಶ್ರೀ ಶ್ರೀಶೈಲ ಖಜೂರಿ, ಹಿರಿಯ ವಕೀಲ ಪಿ.ಎನ್.ಶಹಾ, ಕಲಬುರಗಿ ಜಿಲ್ಲಾ ಸಂಜಯೋಜನಾಧಿಕಾರಿ ಸತೀಶ ಸುವರ್ಣಾ, ತಾಲ್ಲೂಕಾ ಯೋಜನಾಧಿಕಾರಿ ಕೃಷ್ಣಪ್ಪ ಬೆಳವಣಕಿ, ಜಾನಪದ ಪರಿಷತ್ ಅಧ್ಯಕ್ಷ ಅಪ್ಪಾಸಾಹೇಬ ತೀರ್ಥೆ, ವೀರಭದ್ರಪ್ಪ ಹಾರಕೆ, ಬಾಬುರಾವ ಮಡ್ಡೆ, ಸಿ.ಕೆ.ಪಾಟೀಲ, ಎಚ್.ಎಂ.ರೆಡ್ಡಿ, ಶ್ರೀಶೈಲ ಖಜೂರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.