ADVERTISEMENT

ಅಂಧರ ಬಾಳಿಗೆ ಬೆಳಕು ಚೆಲ್ಲುವ ಕೆಲಸ ಮಾಡೋಣ: ಶಾಸಕ ಅಲ್ಲಮಪ್ರಭು ಪಾಟೀಲ

​ಪ್ರಜಾವಾಣಿ ವಾರ್ತೆ
Published 14 ಜುಲೈ 2024, 6:08 IST
Last Updated 14 ಜುಲೈ 2024, 6:08 IST
ಕಲಬುರಗಿ ಹೊರವಲಯದ ಜಿಡಿಎ ಲೇಔಟ್‌ನಲ್ಲಿ ನೂತನವಾಗಿ ನಿರ್ಮಾಣಗೊಂಡ ಅಂಬುಬಾಯಿ ಅಂಧ ಬಾಲಕಿಯರ ವಸತಿ ಶಾಲೆಯ ನೂತನ ಕಟ್ಟಡವನ್ನು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್‌ ಉದ್ಘಾಟಿಸಿದರು. ಗಣ್ಯರು ಉಪಸ್ಥಿತರಿದ್ದರು 
ಕಲಬುರಗಿ ಹೊರವಲಯದ ಜಿಡಿಎ ಲೇಔಟ್‌ನಲ್ಲಿ ನೂತನವಾಗಿ ನಿರ್ಮಾಣಗೊಂಡ ಅಂಬುಬಾಯಿ ಅಂಧ ಬಾಲಕಿಯರ ವಸತಿ ಶಾಲೆಯ ನೂತನ ಕಟ್ಟಡವನ್ನು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್‌ ಉದ್ಘಾಟಿಸಿದರು. ಗಣ್ಯರು ಉಪಸ್ಥಿತರಿದ್ದರು    

ಕಲಬುರಗಿ: ‘ಗದುಗಿನ ಪುಟ್ಟರಾಜ ಗವಾಯಿಗಳ ಹಾಗೆ ಕಲಬುರಗಿಯ ದತ್ತು ಅಗರವಾಲ ಅವರು ಅಂಧರಿಗೆ ಬೆಳಕಾಗಿದ್ದಾರೆ’ ಎಂದು ಶಾಸಕ ಅಲ್ಲಮಪ್ರಭು ಪಾಟೀಲ ಹೇಳಿದರು.

ನಗರ ಹೊರವಲಯದ ಮಾದರಸನಳ್ಳಿ (ಕೋಬ್ರಾ ಕಾಲೊನಿ), ಜಿಡಿಎ ಲೇಔಟ್‌ನಲ್ಲಿ ನೂತನವಾಗಿ ನಿರ್ಮಾಣಗೊಂಡ ಅಂಬುಬಾಯಿ ಅಂಧ ಬಾಲಕಿಯರ ವಸತಿ ಶಾಲೆಯ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಬರೆದಿರುವ ಸಂವಿಧಾನದ ಫಲವಾಗಿ ಇಂದು ಎಲ್ಲಾ ಮಹಿಳೆಯರು ಶಿಕ್ಷಣ ಪಡೆಯುವುದಕ್ಕೆ ಸಾಧ್ಯವಾಗುತ್ತಿದೆ’ ಎಂದು ಹೇಳಿದರು.

ಅಂಗವಿಕಲರ ಹಕ್ಕುಗಳ ಅಧಿನಿಯಮ ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ ಮಾತನಾಡಿ, ‘ಅತಿ ಹೆಚ್ಚು ಅಂಗವಿಕಲರು ನಮ್ಮ ಭಾರತದಲ್ಲಿ ಇದ್ದಾರೆ. ಶಿಕ್ಷಣ ಪಡೆದು ಹಲವಾರು ಕ್ಷೇತ್ರಗಳಲ್ಲಿ ಉನ್ನತ ಅಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿರುವುದು’ ಹೆಮ್ಮೆಯ ವಿಷಯ ಎಂದು ಹೇಳಿದರು.

ADVERTISEMENT

‘ದತ್ತು ಅಗರವಾಲ ಅವರು ಸಹ ಅಂಧರಾಗಿರುವುದರಿಂದ ಅಂಧರ ನೋವು ಏನು ಎಂಬುದು ಅರಿತು ಅವರು ಅಂಧರಿಗಾಗಿ ತಮ್ಮ ತಾಯಿಯ ಹೆಸರಿನಲ್ಲಿ ಶಾಲೆ ಪ್ರಾರಂಭಿಸಿ ಇಂದು ನೂತನ ಕಟ್ಟಡ ನಿರ್ಮಾಣ ಮಾಡಿರುವುದು’ ಶ್ಲಾಘನೀಯ ಎಂದರು.

ವಿಶೇಷ ಅತಿಥಿಯಾಗಿ ಆಗಮಿಸಿದ್ದ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್‌ ಮಾತನಾಡಿ, ‘ಪ್ರತಿ ವರ್ಷ ಸುಮಾರು 100ಕ್ಕೂ ಹೆಚ್ಚು ಅಂಧ ಮಕ್ಕಳಿಗೆ ಶಿಕ್ಷಣ ಸಿಗುತ್ತಿದೆ ಎಂದರೆ, ಅದಕ್ಕೆ ದತ್ತು ಅಗರವಾಲ ಅವರ ಪರಿಶ್ರಮ ಬಹಳಷ್ಟಿದೆ. ಮುಂದಿನ ದಿನಗಳಲ್ಲಿ ಸಮಯಾವಕಾಶ ಕಲ್ಪಿಸಿಕೊಂಡು ಶಾಲೆಗೆ ಆಗಮಿಸಿ ಮಕ್ಕಳ ಜೊತೆಗೆ ಸಂವಾದ ಮಾಡಲು ಪ್ರಯತ್ನಿಸುತ್ತೇನೆ’ ಎಂದು ಹೇಳಿದರು.

ಶಾಲೆಯ ಸಂಸ್ಥಾಪಕ ಅಧ್ಯಕ್ಷ ದತ್ತು ಅಗರವಾಲ ಮಾತನಾಡಿ, ‘ನಮ್ಮ ಶಾಲೆಯಲ್ಲಿ ಶಿಕ್ಷಣ ಪಡೆದು ತಮ್ಮ ಮುಂದಿನ ವಿದ್ಯಾಭ್ಯಾಸಕ್ಕಾಗಿ ಬೆಂಗಳೂರು, ಮೈಸೂರು, ರಾಣೆಬೆನ್ನೂರು ಸೇರಿದಂತೆ ರಾಜ್ಯದ ನಾನಾಕಡೆ ವಿದ್ಯಾಭ್ಯಾಸವನ್ನು ಮಾಡುತ್ತಿರುವುದು ನನಗೆ ತುಂಬಾ ಹೆಮ್ಮೆಯ ವಿಷಯ. ಬರುವ ದಿನಗಳಲ್ಲಿ ನಮ್ಮ ಶಾಲೆಯಲ್ಲಿ ಕಂಪ್ಯೂಟರ್ ತರಬೇತಿ ಸಹ ನೀಡುವುದಕ್ಕೆ ಮುಂದಾಗಿದ್ದೇವೆ’ ಎಂದು ಹೇಳಿದರು.

ಕಟ್ಟಡ ನಿರ್ಮಾಣಕ್ಕೆ ಹಲವಾರು ಗಣ್ಯರು, ವಿವಿಧ ಸಂಸ್ಥೆಗಳು ದೇಣಿಗೆ ನೀಡಿವೆ. ಜಿ.ರಮೇಶ, ಮಳಖೇಡ್ ಅಲ್ಟ್ರಾಟೆಕ್ ಸಿಮೆಂಟ್ ಕಂಪನಿಯ ಸಿಎಸ್ಆರ್ ಮುಖ್ಯಸ್ಥ ಚೇತನ ವಾಗ್ಮೋರೆ, ಶಾಲೆಯ ಅಧ್ಯಕ್ಷರಾದ ಶೋಭಾರಾಣಿ ಅಗರವಾಲ, ಉಪಾಧ್ಯಕ್ಷ ಎಂ.ಐ.ಅರಸಿಕೇರಿ, ಕಾರ್ಯದರ್ಶಿ ಧನರಾಜ ತಾಂಬೂಳೆ, ಜಂಟಿ ಕಾರ್ಯದರ್ಶಿ ಅನೀಲ ಬುಜಾಡೆ, ಖಜಾಂಚಿ ಪ್ರಿಯಾ ಹೊಸಗೌಡ, ಶಾಲಾ ಮುಖ್ಯಶಿಕ್ಷಕಿ ಸಂಗೀತಾ ಠಾಕೂರ, ಸಿಬ್ಬಂದಿ, ವಿದ್ಯಾರ್ಥಿಗಳು ಹಾಜರಿದ್ದರು. ಶಿಕ್ಷಕಿ ಕನ್ಯಾರಾಣಿ ಕಾರ್ಯಕ್ರಮ ನಿರ್ವಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.