ಯಡ್ರಾಮಿ: ಪಟ್ಟಣದ ಬಸ್ ನಿಲ್ದಾಣ ಹಾಗೂ ಡಾ.ಅಂಬೇಡ್ಕರ್ ವೃತ್ತದ ಮಧ್ಯಭಾಗದಲ್ಲಿರುವ ಇಂದಿರಾ ಕ್ಯಾಂಟಿನ್ ಅನ್ನು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಶಾಸಕ ಅಜಯಸಿಂಗ್ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಬಡವರಿಗೆ ಕೂಲಿಕಾರರಿಗೆ ಹಾಗೂ ವಿದ್ಯಾರ್ಥಿಗಳಿಗೆ ಕಡಿಮೆ ದರದಲ್ಲಿ ಹಸಿವು ನೀಗಿಸುವ ಉದ್ದೇಶದಿಂದ ಇಂದಿರಾ ಕ್ಯಾಂಟಿನ್ ಮಾಡಲಾಗಿದೆ. ಕ್ಯಾಂಟೀನ್‌ನಲ್ಲಿ ಗುಣಮಟ್ಟದ ಆಹಾರ ಪೂರೈಕೆ ಜತೆಗೆ ಸ್ವಚ್ಛತೆಗೆ ಎಚ್ಚರಿಕೆ ವಹಿಸಲಾಗಿದೆ ಎಂದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿದೆ. ನಮ್ಮದು ಬಡವರ ಪರ ಸರ್ಕಾರ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ, ಸರ್ಕಾರ ಇಂದಿರಾ ಕ್ಯಾಂಟೀನ್ ಸ್ಥಗಿತಗೊಳಿಸಲಾಗಿತ್ತು. ಜನರಿಗೆ ಅನುಕೂಲವಾಗುವ ಪ್ರದೇಶದಲ್ಲಿ ಆದ್ಯತೆ ನೀಡಲು ಸೂಚಿಸಲಾಗಿದೆ ಇದನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ತಹಶೀಲ್ದಾರ್ ಯಲ್ಲಪ್ಪ ಸುಬೇದಾರ್, ಪ.ಪಂ ಮುಖ್ಯಾಧಿಕಾರಿ ಶ್ಯಾಮ್ ಭಜಂತ್ರಿ ಸೇರಿದಂತೆ ಅಧಿಕಾರಿಗಳು, ಮುಖಂಡರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.