ADVERTISEMENT

‘ಹರಿಯಾಣ ಮಾದರಿಯಲ್ಲಿ ಒಳಮೀಸಲಾತಿ ಜಾರಿಗೊಳಿಸಿ’

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2024, 15:43 IST
Last Updated 22 ಅಕ್ಟೋಬರ್ 2024, 15:43 IST

ಕಲಬುರಗಿ: ಕಾಂಗ್ರೆಸ್‌ ಸರ್ಕಾರವು ರಾಜ್ಯದಲ್ಲಿ ಹರಿಯಾಣ ಮಾದರಿಯಂತೆ ಒಳಮೀಸಲಾತಿಯನ್ನು ಜಾರಿಗೊಳಿಸುವ ಮೂಲಕ ಮಾದಿಗ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಮಾದಿಗ ದಂಡೋರ ಸಂಘಟನೆ ರಾಜ್ಯ ಕಾರ್ಯದರ್ಶಿ ರಾಜು ಹದನೂರ ಆಗ್ರಹಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಹರಿಯಾಣದ ಬಿಜೆಪಿ ಸರ್ಕಾರವು, ಸುಪ್ರೀಂ ಕೋರ್ಟ್‌ನ ಆದೇಶವನ್ನು ಪಾಲಿಸುವ ಮೂಲಕ ಒಳಮೀಸಲಾತಿಯನ್ನು ಜಾರಿಗೊಳಿಸ ಮಾದಿಗ ಸಮುದಾಯಕ್ಕೆ ನ್ಯಾಯ ಒದಗಿಸಿದೆ. ಅಲ್ಲದೇ ಪಕ್ಕದ ತೆಲಂಗಾಣ ರಾಜ್ಯದ ಮುಖ್ಯಮಂತ್ರಿಯವರು ಕೂಡ ಶೀಘ್ರ ಒಳಮೀಸಲಾತಿ ಜಾರಿಗೊಳಿಸುವುದಾಗಿ ಘೋಷಣೆ ಮಾಡಿದ್ದಾರೆ. ಅಲ್ಲದೇ ತೆಲಂಗಾಣ ಮಾದಿಯಂತೆ ರಾಜ್ಯದಲ್ಲೂ ನೇಮಕಾತಿಗಳನ್ನು ತಡೆಹಿಡಿಯಬೇಕು. ಮೀಸಲಾತಿ ಜಾರಿಯಾಗುವವರೆಗೂ ನೇಮಕಾತಿ ಮಾಡಬಾರದು ಎಂದು ಮನವಿ ಮಾಡುತ್ತೇವೆ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT