ಕಲಬುರಗಿ: ‘ನಾವು ಆಚರಿಸುತ್ತಿರುವ 11ನೇ ಅಂತರರಾಷ್ಟ್ರೀಯ ಯೋಗ ದಿನವು ಇಡೀ ಜಗತ್ತಿಗೆ ಒಂದು ಐತಿಹಾಸಿಕ. ಯೋಗವನ್ನು ಭಾರತೀಯರು ಜಗತ್ತಿಗೆ ಪರಿಚಯಿಸಿ, ಉಡುಗೊರೆಯಾಗಿ ನೀಡಿದ್ದಾರೆ. ಪ್ರಪಂಚದಾದ್ಯಂತ 7 ಶತಕೋಟಿ ಜನರು ಇದರ ಪ್ರಯೋಜನವನ್ನು ಪಡೆದಿದ್ದಾರೆ’ ಎಂದು ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿ ಅನಿಲಕುಮಾರ ಬಿಡವೆ ಅಭಿಪ್ರಾಯಪಟ್ಟರು.
ನಗರದ ಶರಣಬಸವ ವಿಶ್ವವಿದ್ಯಾಲಯದಲ್ಲಿ ಶನಿವಾರ ಆಯೋಜಿಸಿದ್ದ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ನಾವು ಪ್ರತಿದಿನ ಯೋಗಾಭ್ಯಾಸ ಮಾಡಬೇಕು. ಒಂದು ವೇಳೆ ಔಷಧವು ವಿಫಲವಾದರೆ ಯೋಗವು ಸಹಾಯ ಮಾಡುತ್ತದೆ. ಅಲೋಪತಿ ವೈದ್ಯರೂ ಯೋಗವನ್ನು ಅಭ್ಯಾಸ ಮಾಡುತ್ತಾರೆ ಮತ್ತು ರೋಗಿಗಳಿಗೆ ಅದರ ಬಗ್ಗೆ ತಿಳಿಹೇಳಿ ಪ್ರೋತ್ಸಾಹಿಸುತ್ತಿದ್ದಾರೆ’ ಎಂದರು.
ಯೋಗ ಪರಿಣತರು ಯೋಗದ ಪ್ರಯೋಜನಗಳನ್ನು ತಿಳಿಸುತ್ತಾ ಯೋಗಾಸನಗಳನ್ನು ಮಾಡಿಸಿದರು.
ಕುಲಸಚಿವ ಎಸ್.ಜಿ. ಡೊಳ್ಳೆಗೌಡರ್, ಕುಲಸಚಿವ (ಮೌಲ್ಯಮಾಪನ) ಎಸ್.ಎಚ್. ಹೊನ್ನಳ್ಳಿ ಸೇರಿದಂತೆ ವಿವಿಧ ವಿಭಾಗಗಳ ಡೀನರು, ಮುಖ್ಯಸ್ಥರು, ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.