ADVERTISEMENT

ಶಹಾಬಾದ್; ನಗರಸಭೆಯಲ್ಲಿ ಜಯಂತಿ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2022, 5:23 IST
Last Updated 6 ಏಪ್ರಿಲ್ 2022, 5:23 IST
ಶಹಾಬಾದ್ ನಗರಸಭೆಯಲ್ಲಿ ನಡೆದ ಬಾಬು ಜಗಜೀವನರಾಂ ಜಯಂತಿ ಕಾರ್ಯಕ್ರಮದಲ್ಲಿ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ ಮಾತನಾಡಿದರು
ಶಹಾಬಾದ್ ನಗರಸಭೆಯಲ್ಲಿ ನಡೆದ ಬಾಬು ಜಗಜೀವನರಾಂ ಜಯಂತಿ ಕಾರ್ಯಕ್ರಮದಲ್ಲಿ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ ಮಾತನಾಡಿದರು   

ಶಹಾಬಾದ್: 'ಡಾ.ಬಾಬಾಸಾಹೇಬ ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾಂ ಅವರು ದೇಶದ ದಲಿತ ಸಮುದಾಯದ 2 ಕಣ್ಣುಗಳಾಗಿ ಆ ವರ್ಗಗಳ ಅಭಿವೃದ್ಧಿಗೆ ಹೋರಾಟ ಮಾಡಿದ ಮಹಾನ್ ವ್ಯಕ್ತಿಗಳು’ ಎಂದು ಶಹಾಬಾದ್ ತಹಸೀಲ್ದಾರ್ ಸುರೇಶ ವರ್ಮಾ ಹೇಳಿದರು.

ಮಂಗಳವಾರ ನಗರಸಭೆಯಲ್ಲಿ ಆಯೋಜಿಸಲಾದ ಡಾ.ಬಾಬು ಜಗಜೀವನರಾಂ ಜಯಂತಿ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ನಗರಸಭೆಯ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ, ನಗರಸಭೆ ಅಧ್ಯಕ್ಷೆ ಅಂಜಲಿ ಕಂಬಾನೂರ ಮಾತನಾಡಿದರು.

ADVERTISEMENT

ನಗರಸಭೆ ಉಪಾಧ್ಯಕ್ಷೆ ಸಲೀಮಾಬೇಗಂ, ಗಿರೀಶ ಕಂಬಾನೂರ, ಕಿರಣ ಕೋರೆ, ಶಿವರಾಜ ಕೋರೆ, ಶರಣು ಪಗಲಾಪೂರ, ರಾಜೇಶ ಯನಗುಂಟಿಕರ್, ಸಂತೋಷ ಹುಲಿ,ಕೃಷ್ಣಪ್ಪ, ಶರಣಗೌಡ ಪಾಟೀಲ, ಸುನೀಲಕುಮಾರ, ರಘುನಾಥ ನರಸಾಳೆ, ಅವಿನಾಶ ಕಂಬಾನೂರ, ಅಮರ ಕೋರೆ, ರವಿ ಬೆಳಮಗಿ, ನೈರ್ಮಲ್ಯ ನಿರೀಕ್ಷಕ ಶಿವರಾಜಕುಮಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.