ADVERTISEMENT

ಜನತಾ ಜಲಧಾರೆ ಯಾತ್ರೆಗೆ ಚಾಲನೆ

ಆಳಂದ; ಅಮರ್ಜಾ ಅಣೆಕಟ್ಟೆಯಲ್ಲಿ ಗಂಗಾಪೂಜೆ, ಪಟ್ಟಣದಲ್ಲಿ ರಥಯಾತ್ರೆ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2022, 6:49 IST
Last Updated 20 ಏಪ್ರಿಲ್ 2022, 6:49 IST
ಆಳಂದದ ಅಮರ್ಜಾ ಅಣೆಕಟ್ಟೆಯಲ್ಲಿ ಜನತಾ ಜಲಧಾರೆ ಯಾತ್ರೆಗೆ ಮಹೇಶ್ವರಿ ವಾಲಿ ನೇತೃತ್ವದಲ್ಲಿ ಪೂಜೆ ಸಲ್ಲಿಸಲಾಯಿತು
ಆಳಂದದ ಅಮರ್ಜಾ ಅಣೆಕಟ್ಟೆಯಲ್ಲಿ ಜನತಾ ಜಲಧಾರೆ ಯಾತ್ರೆಗೆ ಮಹೇಶ್ವರಿ ವಾಲಿ ನೇತೃತ್ವದಲ್ಲಿ ಪೂಜೆ ಸಲ್ಲಿಸಲಾಯಿತು   

ಆಳಂದ: ‘ರಾಜ್ಯದ ಎಲ್ಲ ರೈತರ ಹೊಲಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಸಂಕಲ್ಪದಿಂದ ಜೆಡಿಎಸ್ ಪಕ್ಷ ರಾಜ್ಯದಾದ್ಯಂತ ಜನತಾ ಜಲಧಾರೆ ಯಾತ್ರೆ ಆರಂಭಿಸಿದೆ’ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಕೇದಾರಲಿಂಗಯ್ಯ ಹಿರೇಮಠ ತಿಳಿಸಿದರು.

ತಾಲ್ಲೂಕಿನ ಅಮರ್ಜಾ ಅಣೆಕಟ್ಟೆಯಲ್ಲಿ ಜೆಡಿಎಸ್ ನಾಯಕಿ ಮಹೇಶ್ವರಿ ವಾಲಿ ನೇತೃತ್ವದಲ್ಲಿ ಮಂಗಳವಾರ ಜನತಾ ಜಲಧಾರೆ ಯಾತ್ರೆಯ ಸ್ವಾಗತ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಯ ಅಮರ್ಜಾ ಅಣೆಕಟ್ಟು, ಗಂಡೂರಿ ನಾಲಾ, ಬೆಣ್ಣೆತೊರಾ, ಮುಲ್ಲಾಮಾರಿ ನೀರಾವರಿ ಯೋಜನೆಗಳ ಲಾಭ ಇಂದಿಗೂ ರೈತರಿಗೆ ಸಮರ್ಪಕವಾಗಿ ದೊರೆತಿಲ್ಲ. ಪ್ರಾದೇಶಿಕ ಪಕ್ಷದಿಂದ ಮಾತ್ರ ರೈತರ ಮುಖ್ಯ ಬೇಡಿಕೆಗಳು ಈಡೇರಲಿವೆ ಎಂದರು.

ADVERTISEMENT

ಮಹೇಶ್ವರಿ ಎಸ್.ವಾಲಿ ಮಾತನಾಡಿ, ರಾಜ್ಯದಲ್ಲಿ ನಿರಂತರವಾಗಿ ಅನಾವೃಷ್ಟಿ, ಅತಿವೃಷ್ಟಿಯಿಂದ ಬೆಳೆ ಹಾನಿಯಾಗುತ್ತಿದೆ. ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರತಿ ಹಳ್ಳಿಗೂ ಕುಡಿಯುವ ನೀರು, ಪ್ರತಿ ರೈತನ ಜಮೀನಿಗೆ ನೀರಾವರಿ ಸೌಲಭ್ಯ ಒದುಗಿಸುವ ಗುರಿಯೊಂದಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜಲಧಾರೆ ಯಾತ್ರೆ ಕೈಗೊಂಡಿದ್ದಾರೆ ಎಂದರು.

ಜೆಡಿಎಸ್ ರಾಜ್ಯ ಯುವ ಘಟಕದ ಉಪಾಧ್ಯಕ್ಷ ಕೃಷ್ಣಾ ರೆಡ್ಡಿ, ಬಸವರಾಜ ಬಿರಬಟ್ಟಿ, ಶಂಕರ ಕಟ್ಟಿಸಂಗಾವಿ ಮಾತನಾಡಿದರು.

ಪಾರ್ವತಿ ಪುರಾಣಿಕ, ಶಂಕುತಲಾ ಪಾಟೀಲ, ಮಹಾದೇವಿ ಕೇಸರಟಗಿ, ಶಿವಪೂಜಪ್ಪ ಬಿರಾದಾರ, ಶರಣು ಕುಲಕರ್ಣಿ, ಶಿವಕುಮಾರ ದ್ಯಾಮಗೊಂಡ, ಮಹಾಂತಪ್ಪ ಮದರಿ ಇದ್ದರು. ಮೊದಲು ಅಮರ್ಜಾ ಅಣೆಕಟ್ಟೆಯಲ್ಲಿ ಮಹೇಶ್ವರಿ ವಾಲಿ ನೇತೃತ್ವದಲ್ಲಿ ಗಂಗಾಪೂಜೆ ಹಾಗೂ ಕಳಸದ ಮೆರವಣಿಗೆ, ಮಹಿಳೆಯರಿಗೆ ಉಡಿ ತುಂಬುವ ಕಾರ್ಯ ಜರುಗಿತು.ಯಾತ್ರೆ ಪಟ್ಟಣದ ಮುಖ್ಯರಸ್ತೆಗಳಲ್ಲಿ ಸಂಚರಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.