ADVERTISEMENT

ನೀಟ್ ಪರೀಕ್ಷೆಯಲ್ಲಿ ಜನಿವಾರ ವಿವಾದ: ಇಬ್ಬರು ಆರೋಪಿಗಳ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 5 ಮೇ 2025, 20:23 IST
Last Updated 5 ಮೇ 2025, 20:23 IST
<div class="paragraphs"><p>ನೀಟ್ ಪರೀಕ್ಷೆ&nbsp;</p></div>

ನೀಟ್ ಪರೀಕ್ಷೆ 

   

ಕಲಬುರಗಿ: ‘ನೀಟ್ ಪರೀಕ್ಷೆಯ ಕೇಂದ್ರದಲ್ಲಿ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ತೆಗೆಯಿಸಿ ಪರೀಕ್ಷೆಗೆ ಅನುಮತಿಸಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಬಳಿಕ ಠಾಣೆಯ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ’ ಎಂದು ಪೊಲೀಸ್ ಕಮಿಷನರ್ ಶರಣಪ್ಪ ಎಸ್‌.ಡಿ. ತಿಳಿಸಿದರು.

‘ವಿದ್ಯಾರ್ಥಿ ನೀಡಿದ ದೂರಿನ ಅನ್ವಯ ಶರಣಗೌಡ ಹಾಗೂ ಗಣೇಶ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗಿದ್ದು, ಕಾನೂನಿನ ಪ್ರಕಾರ ಕ್ರಮ ತೆಗೆದುಕೊಂಡಿದ್ದೇವೆ. ಪರೀಕ್ಷಾ ಕೇಂದ್ರದಲ್ಲಿ ಆಗಿರುವ ಲೋಪದ ಬಗ್ಗೆಯೂ ತನಿಖೆ ನಡೆಸಲಾಗುವುದು’ ಎಂದು ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.