ADVERTISEMENT

ರಿಂಗ್ ರೋಡ್ ದುರಸ್ತಿಗೊಳಿಸಲು ಜೆಡಿಎಸ್ ಒತ್ತಾಯ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2020, 2:01 IST
Last Updated 11 ಸೆಪ್ಟೆಂಬರ್ 2020, 2:01 IST
ರಿಂಗ್ ರಸ್ತೆ ದುರಸ್ತಿಗೆ ಒತ್ತಾಯಿಸಿ ಜೆಡಿಎಸ್ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಿಗೆ ಮನವಿ ಸಲ್ಲಿಸಿದರು
ರಿಂಗ್ ರಸ್ತೆ ದುರಸ್ತಿಗೆ ಒತ್ತಾಯಿಸಿ ಜೆಡಿಎಸ್ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಿಗೆ ಮನವಿ ಸಲ್ಲಿಸಿದರು   

ಕಲಬುರ್ಗಿ: ಹುಮನಾಬಾದ್‌ ಕ್ರಾಸ್‌ನಿಂದ ರಾಮಮಂದಿರಕ್ಕೆ ಹೋಗುವ ರಿಂಗ್ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು, ಕೂಡಲೇ ದುರಸ್ತಿ ಮಾಡಬೇಕು ಎಂದು ಒತ್ತಾಯಿಸಿ ಜಾತ್ಯತೀತ ಜನತಾದಳ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಈ ರಸ್ತೆಯಲ್ಲಿ ಸಾಕಷ್ಟು ತಗ್ಗುಗಳು ನಿರ್ಮಾಣವಾಗಿದ್ದು, ಅವುಗಳನ್ನು ಮುಚ್ಚಲು ಕ್ರಮ ಕೈಗೊಳ್ಳಬೇಕು. ನಗರದಲ್ಲಿ ವಾಹನ ದಟ್ಟಣೆ ಹೆಚ್ಚುತ್ತಿರುವುದರಿಂದ ಇನ್ನೊಂದು ರಿಂಗ್ ರಸ್ತೆಯನ್ನು ನಿರ್ಮಿಸಬೇಕು. ನಗರದೊಳಗೆ ಲಾರಿಗಳ ಓಡಾಟಕ್ಕೆ ಕಡಿವಾಣ ಹಾಕಬೇಕು. ಸೆ 9ರಂದು ಇದೇ ರಸ್ತೆಯಲ್ಲಿ ಅಪಘಾತ ಸಂಭವಿಸಿ ವ್ಯಕ್ತಿಯೊಬ್ಬರು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ರಸ್ತೆ ದುರಸ್ತಿ ಮಾಡದಿದ್ದರೆ ಮಾಲಗತ್ತಿ ರಸ್ತೆಯನ್ನು ಬಂದ್ ಮಾಡಿ ಪ್ರತಿಭಟನೆ ಮಾಡುವುದು ಅನಿವಾರ್ಯ ಎಂದು ಪಕ್ಷದ ಜಿಲ್ಲಾ ಯುವ ಘಟಕದ ಅಧ್ಯಕ್ಷ ಮೊಹಮ್ಮದ್ ಅಲೀಂ ಇನಾಮದಾರ ಎಚ್ಚರಿಸಿದರು.

ಮುಖಂಡರಾದ ಉಸ್ಮಾನ್ ಅಲಿ ಗುತ್ತೇದಾರ, ಶಿವಾಜಿ, ಮನೋಹರ ಈ. ಪೋದ್ದಾರ, ಆನಂದ ಲಿಂಗನವಾಡಿ, ಅರವಿಂದ ರಂಜೇರಿ, ಅಲಂದಾನ ಸೈದಿ, ಅಬ್ಬು ಬೇಕರ್, ಶಹಾ ಪಟೇಲ್, ಸೈಯದ್ ನದೀಂ, ಸಯ್ಯದ್ ಸುಲೇಮಾನ್, ಶಂಗೀರ್ ಖಾನ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.