ADVERTISEMENT

ಜೆಇಇ ಮೇನ್ಸ್‌: ಗುರುಕುಲ ವಿದ್ಯಾರ್ಥಿಗಳ ಸಾಧನೆ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2021, 3:03 IST
Last Updated 17 ಸೆಪ್ಟೆಂಬರ್ 2021, 3:03 IST
ವಿದ್ಯಾರ್ಥಿ ಚೇತನ ಎ. ಜಾಧವ (ಜೆಇಇ ಶೇ 98.08)
ವಿದ್ಯಾರ್ಥಿ ಚೇತನ ಎ. ಜಾಧವ (ಜೆಇಇ ಶೇ 98.08)   

ಕಲಬುರ್ಗಿ: ನಗರದ ಜಾಜಿ ಶಿಕ್ಷಣ ಸಂಸ್ಥೆಯ ಗುರುಕುಲ ಪದವಿಪೂರ್ವ ಮಹಾವಿದ್ಯಾಲಯದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜೆಇಇ ಮೇನ್ಸ್‌ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.

ವಿದ್ಯಾರ್ಥಿ ಚೇತನ ಎ. ಜಾಧವ ಅವರು ಶೇ 98.08 ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಅಲ್ಲದೇ,ಆಲ್ ಇಂಡಿಯಾ ರ್‍ಯಾಂಕ್‌ನ ಎಸ್.ಸಿ. ಕೆಟಗರಿಯಲ್ಲಿ 380ನೇ ರ್‍ಯಾಂಕ್‌ ಗಳಿಸಿದ್ದಾರೆ. ದ್ವಿತೀಯ ಸ್ಥಾನವನ್ನು ಪಡೆದ ಅಕ್ಷತ್ ಎ. ಗಾದಾ ಶೇ 96.81ರಷ್ಟು ಸಾಧನೆ ಮಾಡಿದ್ದಾರೆ.ಮಹಮ್ಮದ್‌ ಜವಾದ ರೇಯಾನ್ ಅವರು ಶೇ 94.79 ಅಂಕಗಳ ಮೂಲಕ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಒಟ್ಟು ವಿದ್ಯಾರ್ಥಿಗಳಲ್ಲಿ 55 ವಿದ್ಯಾರ್ಥಿಗಳು ಜೆಇಇ ಅಡ್ವಾನ್ಸ್‌ ಪರೀಕ್ಷೆಗೆ ಅರ್ಹತೆ ಪಡೆದುಕೊಂದ್ದಾರೆ.ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು ಮತ್ತು ಆಡಳಿತ ಮಂಡಳಿಯ ಸದಸ್ಯರು ಹಾಗು ಕಾಲೇಜಿನ ಪ್ರಾಂಶುಪಾಲರು, ಉಪಪ್ರಾಂಶುಪಾಲರು, ವಿಭಾಗದ ಮುಖ್ಯಸ್ಥರು ಅಭಿನಂದಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.