ADVERTISEMENT

ಜೇವರ್ಗಿ: ಸಾಲಬಾಧೆಯಿಂದ ವಿಷ ಸೇವಿಸಿ ರೈತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2025, 4:27 IST
Last Updated 10 ನವೆಂಬರ್ 2025, 4:27 IST
ಗುಂಡಪ್ಪಗೌಡ
ಗುಂಡಪ್ಪಗೌಡ   

ಜೇವರ್ಗಿ: ಸಾಲಬಾಧೆಯಿಂದ ವಿಷ ಸೇವಿಸಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ತಾಲ್ಲೂಕಿನ ನೆಲೋಗಿ ಪೊಲೀಸ್ ಠಾಣಾ ವ್ಯಾಪ್ತಿಯ ಸೊನ್ನ ಗ್ರಾಮದಲ್ಲಿ ನಡೆದಿದೆ.
ಗುಂಡಪ್ಪಗೌಡ ಶಾಂತಪ್ಪಗೌಡ ಪೊಲೀಸ್ ಪಾಟೀಲ ( 65 ವರ್ಷ) ಎಂಬವರು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

ನೆಲೋಗಿ ಪಿಕೆಜಿಬಿ ಬ್ಯಾಂಕ್‌ನಲ್ಲಿ ₹2 ಲಕ್ಷ, ಸೊನ್ನ ವಿಎಸ್ಎಸ್ಎನ್‌ನಲ್ಲಿ ₹50 ಸಾವಿರ, ಖಾಸಗಿಯಾಗಿ ₹5 ಲಕ್ಷ ಸಾಲ ಮಾಡಿಕೊಂಡಿದ್ದರು. 4 ಎಕರೆ ಜಮೀನಿನಲ್ಲಿ ಕೃಷಿ ಕಾಯಕ ಮಾಡಿಕೊಂಡಿದ್ದ ಗುಂಡಪ್ಪಗೌಡ ಅತಿವೃಷ್ಟಿಯಿಂದ ಬೆಳೆಹಾನಿಯಾಗಿ ನಷ್ಟ ಅನುಭವಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಉಮೇಶ ಶರ್ಮಾ, ಪಿಎಸ್ಐ ಚಿದಾನಂದ ಸವದಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.