ADVERTISEMENT

ಜೇವರ್ಗಿ: ತಲೆ ಮೇಲೆ ಕಲ್ಲು ಹೊತ್ತು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 23 ಜನವರಿ 2026, 7:29 IST
Last Updated 23 ಜನವರಿ 2026, 7:29 IST
ಜೇವರ್ಗಿ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಪ್ರಾಂತ ರೈತ ಸಂಘದ ಮುಖಂಡರು ತಲೆ ಮೇಲೆ ಕಲ್ಲು ಹೊತ್ತು ಪ್ರತಿಭಟನೆ ನಡೆಸಿದರು
ಜೇವರ್ಗಿ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಪ್ರಾಂತ ರೈತ ಸಂಘದ ಮುಖಂಡರು ತಲೆ ಮೇಲೆ ಕಲ್ಲು ಹೊತ್ತು ಪ್ರತಿಭಟನೆ ನಡೆಸಿದರು   

ಜೇವರ್ಗಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಧರಣಿ ಕೈಗೊಂಡಿದ್ದರೂ ಈವರೆಗೆ ಸಂಬಂಧಿಸಿದ ಅಧಿಕಾರಿಗಳು ಭೇಟಿ ನೀಡಿ ಸಮಸ್ಯೆ ಆಲಿಸದ ಹಿನ್ನೆಲೆ ರೈತರು ಗುರುವಾರ ತಹಶೀಲ್ದಾರ್ ಕಚೇರಿ ಎದುರು ತಲೆ ಮೇಲೆ ಕಲ್ಲು ಹೊತ್ತು ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಿದರು.

ಕೇಂದ್ರ ಸರ್ಕಾರ ನರೇಗಾ ಮಾರ್ಪಡಿಸಿ ರೂಪಿಸಿದ ವಿಬಿ–ಜಿ ರಾಮ್ ಜಿ ಕಾಯ್ದೆಯು ದೇಶದ ಬಡ ಮತ್ತು ಮಧ್ಯಮ ವರ್ಗದ ಉದ್ಯೋಗದ ಹಕ್ಕನ್ನು ಕಸಿದುಕೊಳ್ಳುತ್ತದೆ. ಕೂಡಲೇ ಹಿಂಪಡೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ರೈತರಿಗೆ ಬೆಳೆಹಾನಿ ಪರಿಹಾರ ಬಿಡುಗಡೆ ಮಾಡಬೇಕು. ಪರಿಹಾರ ವಿತರಣೆಯಲ್ಲಿ ತಾರತಮ್ಮ ಮಾಡಲಾಗಿದ್ದು, ಪರಿಹಾರ ಸಿಗದೆ ಇರುವ ರೈತರಿಗೆ ಕೂಡಲೇ ಎಕರೆಗೆ 25 ಸಾವಿರ ನೀಡಬೇಕು. ಹರನೂರದಿಂದ ರೇವನೂರವರೆಗೂ ಹರವಾಳ ಗ್ರಾಮದಿಂದ ವಿಜಯಪುರ ಮಾರ್ಗದವರೆಗೂ ರಸ್ತೆ ಡಾಂಬರೀಕರಣ ಮಾಡಬೇಕು ಎಂದು ಒತ್ತಾಯಿಸಿದರು.

ADVERTISEMENT

ಸ್ವಾಮಿನಾಥನ್ ಆಯೋಗದ ವರದಿಯಂತೆ ಬೆಂಬಲ ಬೆಲೆ ನಿಗದಿಪಡಿಸಬೇಕು. ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು' ಎಂದು ಆಗ್ರಹಿಸಿದರು.

ತಹಶೀಲ್ದಾರ್ ಮಲ್ಲಣ್ಣ ಯಲಗೋಡ ಸ್ಥಳಕ್ಕೆ ಆಗಮಿಸಿ, ‘ಪರಿಹಾರ ವಿತರಣೆಯಲ್ಲಿ ಆಗಿರುವ ಸಮಸ್ಯೆ ವಾರದೊಳಗೆ ಇತ್ಯರ್ಥ ಪಡಿಸಿ ಎಲ್ಲಾ ರೈತರಿಗೆ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ನಂತರ ತಾಪಂ ಕಚೇರಿಗೆ ತೆರಳಿ ಇಒ ಅವರ ಕಚೇರಿಯ ಎದುರು ಪ್ರತಿಭಟನೆ ಮುಂದುವರೆಸಿದರು. ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪಟ್ಟುಹಿಡಿದರು.

ಪ್ರಾಂತ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಸುಭಾಷ ಹೊಸಮನಿ, ಉಪಾಧ್ಯಕ್ಷ ಮಲ್ಕಪ್ಪ ಹರನೂರ, ಕಾರ್ಯದರ್ಶಿ ರೇವುನಾಯಕ ಜಾಧವ, ಬಸವರಾಜ ನಡುವಿನಕೇರಿ, ಸಿದ್ದಪ್ಪ ಹಂಗರಗಿ, ನಿಂಗಣ್ಣ ಆಡೀನ್, ಶ್ರೀಕಾಂತ ದಾಸರ, ಉಸ್ಮಾನ್ ಅಲಿ ಇನಾಮದಾರ, ಸಕ್ರೆಪ್ಪ ಮ್ಯಾಗೇರಿ, ಭೀಮರಾಯ ದಾಸರ, ಸಿದ್ದಣ್ಣ ಆದವಾನಿ, ರಮೇಶ ಬಂದರವಾಡ, ಗುರಪ್ಪ ಮುಕ್ಕಾ, ರಾಜು ಸಾಥಖೇಡ, ಈರಣ್ಣ ರಾಠೋಡ, ಯಲ್ಲಾಲಿಂಗ ತಳವಾರ, ಬಸವರಾಜ ಹನ್ನೂರ, ಮಹಾಂತೇಶ ನಾಯ್ಕೋಡಿ, ಮಲ್ಲಿಕಾರ್ಜುನ ಹೊಸಮನಿ, ಲಕ್ಷ್ಮಣ ಕವಲ್ದಾರ್, ಬಾಲರಾಜ ಕೋಟೆ ಸೇರಿದಂತೆ ರೈತರು, ಮಹಿಳೆಯರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.