ಜೇವರ್ಗಿ: ಕಳೆದ ಕೆಲ ದಿನಗಳಿಂದ ಕೆಂಡದಂತಹ ಬಿಸಿಲಿಗೆ ಬೆಂಡಾಗಿದ್ದ ಜನರಿಗೆ ಬುಧವಾರ ಸಂಜೆ ಸುರಿದ ಅಕಾಲಿಕ ಮಳೆ ತಂಪೆರೆಯಿತು. ಬುಧವಾರ ಸುಮಾರು ಒಂದು ಗಂಟೆ ಗುಡುಗು, ಗಾಳಿ ಮಿಶ್ರಿತ ಮಳೆ ಸುರಿಯಿತು.
ಧಾರಾಕಾರ ಮಳೆ ಸುರಿದಿದ್ದರಿಂದ ಪಟ್ಟಣದ ಹಲವು ಬಡಾವಣೆಗಳ ಚರಂಡಿಯಲ್ಲಿ ನೀರು ರಸ್ತೆಯ ಮೇಲೆ ಹರಿಯಿತು. ಬಸವೇಶ್ವರ ವೃತ್ತದ ಹತ್ತಿರ ಚರಂಡಿಯಲ್ಲಿ ಹೂಳು ತುಂಬಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿ-150(ಎ)ರ ಮೇಲೆ ನೀರು ನಿಂತು ವಾಹನ ಸವಾರರು ಪರದಾಡುವಂತಾಯಿತು. ತಾಲ್ಲೂಕಿನ ಸುತ್ತಲಿನ ಕೆಲ ಗ್ರಾಮಗಳಲ್ಲಿ ಮಳೆಯಾದ ಕುರಿತು ವರದಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.