
ಜೇವರ್ಗಿ: ಪಟ್ಟಣದ ತಾಲ್ಲೂಕು ಪಂಚಾಯಿತಿಯ ಸಾಮರ್ಥ್ಯ ಸೌಧದಲ್ಲಿ ಫೌಂಡೇಶನ್ ಫಾರ್ ಎಕಲಾಜಿಕಲ್ ಸೆಕ್ಯೂರಿಟಿ ಸಂಸ್ಥೆಯು ಮುಂದಾಳತ್ವದಲ್ಲಿ ಈಚೆಗೆ ಸಾಮೂಹಿಕ ಆಸ್ತಿಗಳ ಅಂತರರಾಷ್ಟ್ರೀಯ ಮಟ್ಟದ ಸಮ್ಮೇಳನ ಕಾರ್ಯಕ್ರಮ ಜೂಮ್ ಮೀಟಿಂಗ್ ಮತ್ತು ಯುಟ್ಯೂಬ್ ಮೂಲಕ ಜರುಗಿತು.
ಅಂತರರಾಷ್ಟ್ರೀಯ ಮಟ್ಟದ ಈ ಸಮ್ಮೇಳನವು ಹಲವು ವಿಷಯಗಳನ್ನು ಒಳಗೊಂಡಿದ್ದು, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಸಮುದಾಯ ಸಂಪನ್ಮೂಲಗಳ ಅಭಿವೃದ್ಧಿ ಮತ್ತು ಕಾಮಗಾರಿಗಳ ಪ್ರಮುಖ ಕಾರ್ಯ ವೈಖರಿ ಬಗ್ಗೆ ಹಲವು ರಾಜ್ಯಗಳ ಪ್ರತಿನಿಧಿಗಳು ತಮ್ಮ ತಮ್ಮ ಕಾರ್ಯಕ್ರಮಗಳನ್ನು ಪ್ರೊಜೆಕ್ಟೇಶನ್ ಹಾಗೂ ದೂರವಾಣಿ ಮುಖಾಂತರ ಚರ್ಚಾ ವಿಷಯವಾಗಿ ವಿವರಿಸಿದರು.
ಕರ್ನಾಟಕ ರಾಜ್ಯದ ಸರ್ಕಾರಿ ಸಾಮೂಹಿಕ ಆಸ್ತಿಗಳನ್ನು ಉಳಿಸುವಲ್ಲಿ ಮಹಿಳೆಯರು ಮತ್ತು ಗ್ರಾಮ ಪಂಚಾಯಿತಿಯ ಜನ ಪ್ರತಿನಿಧಿಗಳ ಪಾತ್ರದ ಬಗ್ಗೆ ಗ್ರಾಮ ಪರಿಸರ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಭಾಗವಹಿಸಿ ಗ್ರಾಮಗಳಲ್ಲಿ ಪರಿಸರ ಅಭಿವೃದ್ಧಿ ಮತ್ತು ಪರಿಸರ ಸಂರಕ್ಷಣೆ ಬಗ್ಗೆ ಚರ್ಚಿಸಿದರು.
ತಾ.ಪಂ ಇಒ ರವಿಚಂದ್ರ ರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಐಇಸಿ ಸಂಯೋಜಕ ಚಿದಂಬರ ಪಾಟೀಲ, ಎನ್‌ಆರ್‌ಎಲ್ಎಂ ಯೋಜನೆ ತಾಲ್ಲೂಕು ವ್ಯವಸ್ಥಾಪಕ ಚಂದ್ರಶೇಖರ, ಸಿ.ಎಸ್.ಅಶ್ವಿನಿ, ಪ್ರಮೋದ್, ಸ್ವಸಹಾಯ ಸಂಘಗಳ ಒಕ್ಕೂಟದ ಸದಸ್ಯರು ಮತ್ತಿತರರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.