ಚುನಾವಣೆ
(ಸಾಂದರ್ಭಿಕ ಚಿತ್ರ)
ಜೇವರ್ಗಿ: ಭಾರಿ ಕುತೂಹಲ ಮೂಡಿಸಿರುವ ಜೇವರ್ಗಿ ಪುರಸಭೆ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆ ಫೆ.12ರಂದು ನಿಗದಿಯಾಗಿದೆ.
ಜೇವರ್ಗಿ ಪುರಸಭೆಯಲ್ಲಿ 17 ಬಿಜೆಪಿ, 3 ಜೆಡಿಎಸ್ ಹಾಗೂ 3 ಕಾಂಗ್ರೆಸ್ ಸದಸ್ಯರು ಸೇರಿದಂತೆ ಒಟ್ಟು 23 ಸದಸ್ಯರ ಸಂಖ್ಯಾ ಬಲ ಇದ್ದು, ಅಧ್ಯಕ್ಷ ಗಾದಿಗಾಗಿ ಮತ್ತೆ ರಾಜಕೀಯ ಗುದ್ದಾಟ ಶುರು ಆಗಿದೆ. ಅಧಿಕಾರ ಹಿಡಿಯಲು ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರ ನಡುವೆ ತೀವೃ ಪೈಪೋಟಿ ಏರ್ಪಟ್ಟಿದೆ.
ಕೆಲ ತಿಂಗಳ ಹಿಂದೆ ಜೆಡಿಎಸ್ ರಾಜ್ಯ ಕಾರ್ಯಾದ್ಯಕ್ಷ ಹಾಗೂ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಬಿಜೆಪಿಯಿಂದ ಗೆದ್ದ 13 ಜನ ಪುರಸಭಾ ಸದಸ್ಯರನ್ನು ಜೆಡಿಎಸ್‌ಗೆ ಕರೆ ತಂದಿದ್ದಾರೆ. ಇತ್ತ ಬಿಜೆಪಿಯ ನಿಕಟಪೂರ್ವ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ ವಿಪ್ ಅಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದಾರೆ. ಇತ್ತ ಕಾಂಗ್ರೆಸ್‌ನ ಮೂವರು ಸದಸ್ಯರು ಕಾದು ನೋಡುವ ತಂತ್ರ ಅನುಸರಿಸುತ್ತಿದ್ದಾರೆ. ಕಳೆದ ಒಂದೂವರೆ ವರ್ಷದಿಂದ ಅಧ್ಯಕ್ಷ-ಉಪಾದ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿರಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.