ಜೇವರ್ಗಿ: ತಾಲ್ಲೂಕಿನ ಅಂಕಲಗಾ ತಾಂಡಾದಲ್ಲಿ ರೈತ ಲಕ್ಷ್ಮಣ ಸೋಮಲು ರಾಠೋಡ (65) ಮಂಗಳವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಲಕ್ಷ್ಮಣ ಅವರು ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕ್‌ನಲ್ಲಿ ₹2 ಲಕ್ಷ, ಇಟಗಾ ಸೊಸೈಟಿಯಲ್ಲಿ ₹50 ಸಾವಿರ, ಖಾಸಗಿಯಾಗಿ ₹5 ಲಕ್ಷ ಸಾಲ ಮಾಡಿಕೊಂಡಿದ್ದರು.
ಕೃಷಿಗಾಗಿ ಮಾಡಿದ ಸಾಲ ತೀರಿಸಲಾಗದೇ ಮನನೊಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.