ಚಿಂಚೋಳಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ 74 ವಲಯ ಅರಣ್ಯಾಧಿಕಾರಿಗಳ ಹುದ್ದೆಗಳು ಮಂಜೂರಾಗಿದ್ದು, ಇದರಲ್ಲಿ 52 ಹುದ್ದೆಗಳು ಭರ್ತಿ ಮಾಡಲಾಗಿದೆ. 22 ಹುದ್ದೆಗಳು ಖಾಲಿಯಿವೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಶಾಸಕ ಡಾ.ಅವಿನಾಶ ಜಾಧವ ಅವರು ಅಧಿವೇಶನದಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ 163 ಸಾಮಾಜಿಕ ಅರಣ್ಯ ವಲಯಗಳಿದ್ದು, ಕಲ್ಯಾಣ ಕರ್ನಾಟಕವು ಸೇರಿದಂತೆ ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದ ತಾಲ್ಲೂಕುಗಳಲ್ಲಿ ಸಾಮಾಜಿಕ ಅರಣ್ಯ ವಲಯ ಮತ್ತು ವೃಂದದ ಹುದ್ದೆಗಳ ಮರು ವಿನ್ಯಾಸಕ್ಕೆ ಸಂಪುಟ ಉಪಸಮಿತಿಯ ನಿರ್ದೇಶನದಂತೆ ಪರಿಶೀಲಿಸಲಾಗುತ್ತಿದೆ ಎಂದಿದ್ದಾರೆ.
ವನ್ಯಜೀವಿ ಧಾಮದಲ್ಲಿ ಒಂದು ಗ್ರಾಮ: ಚಿಂಚೋಳಿ ವನ್ಯಜೀವಿ ಧಾಮದಲ್ಲಿ ಶೇರಿಭಿಕನಳ್ಳಿ ಗ್ರಾಮವಿದೆ. ವನ್ಯಜೀವಿ ಧಾಮದ ಅಂಚಿನಲ್ಲಿ 32 ಗ್ರಾಮಗಳಿವೆ ಎಂದು ಸಚಿವರು ತಿಳಿಸಿದ್ದಾರೆ.
134.88 ಚದರ ಕಿ.ಮೀ ಮೀಸಲು ಅರಣ್ಯವನ್ನು ವನ್ಯಜೀವಿ ಧಾಮವಾಗಿ 2011ರಲ್ಲಿ ಘೋಷಿಸಲಾಗಿದೆ. ವನ್ಯಜೀವಿ ಧಾಮದಲ್ಲಿ ಪ್ರಾಣಿಗಳು ಭಯ ಮುಕ್ತವಾಗಿ ಜೀವಿಸಲು 4 ಕಳ್ಳಬೇಟೆ ತಡೆ ಶಿಬಿರ, ವನ್ಯಜೀವಿಗಳಿಗೆ ಕುಡಿಯುವ ನೀರಿಗಾಗಿ ನೀರಿನ ಹೊಂಡ ನಿರ್ಮಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.