ADVERTISEMENT

ಕಲಬುರಗಿ | ಕಾಗಿಣಾದಲ್ಲಿ‌ ತಗ್ಗಿದ ಪ್ರವಾಹ: ದಂಡೋತಿ ಸೇತುವೆ ಸಂಚಾರಕ್ಕೆ ಮುಕ್ತ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2025, 5:14 IST
Last Updated 23 ಸೆಪ್ಟೆಂಬರ್ 2025, 5:14 IST
<div class="paragraphs"><p>ಕಾಗಿಣಾದಲ್ಲಿ‌ ತಗ್ಗಿದ ಪ್ರವಾಹ</p></div>

ಕಾಗಿಣಾದಲ್ಲಿ‌ ತಗ್ಗಿದ ಪ್ರವಾಹ

   

ಚಿತ್ತಾಪುರ: ತಾಲ್ಲೂಕಿನ ದಂಡೋತಿ ಗ್ರಾಮದ ಹತ್ತಿರ ಹರಿಯುತ್ತಿರುವ ಕಾಗಿಣಾ ನದಿಯಲ್ಲಿ ಮಂಗಳವಾರ ಬೆಳಿಗ್ಗೆ ಪ್ರವಾಹ ಕಡಿಮೆಯಾಗಿ ಕಳೆದ 30 ಗಂಟೆಗಳ ಕಾಲ ಮುಳುಗಡೆಯಾಗಿದ್ದ ಸೇತುವೆ ಸಂಚಾರಕ್ಕೆ ಮುಕ್ತವಾಗಿದೆ.

ಸೇತುವೆ ಮೇಲೆ ದುರಸ್ತಿ ಮಾಡಿದ್ದ ರಸ್ತೆ ಅಲ್ಲಲ್ಲಿ ಪ್ರವಾಹದ ರಭಸಕ್ಕೆ ಕಿತ್ತು ಹೋಗಿದೆ. ವಾಹನಗಳ ಸಂಚಾರ ಇನ್ನೂ ಪ್ರಾರಂಭವಾಗಿಲ್ಲ. ಬೈಕ್, ಕಾರು, ಜೀಪು ಸಂಚಾರಕ್ಕೆ ಸಮಸ್ಯೆಯಿಲ್ಲ. ಸೇತುವೆ ಮೇಲೆಯೆ ಸಿಮೆಂಟ್ ಕಂಬಗಳ ಹತ್ತಿರ ಅಳವಡಿಸಿದ್ದ ಮೊಬೈಲ್ ನೆಟವರ್ಕ್ ಕೇಬಲ್ ವೈರ್ ಕಿತ್ತು ಹೋಗಿದೆ.

ADVERTISEMENT

ಬಸ್ ಸಂಚಾರ ಪ್ರಾರಂಭವಾಗದ್ದರಿಂದ ನದಿಯ ಆಚೆಗಿರುವ‌ ಗ್ರಾಮಗಳ ವಿದ್ಯಾರ್ಥಿಗಳು ಚಿತ್ತಾಪುರ ಪಟ್ಟಣದಲ್ಲಿನ ಶಾಲಾ ಕಾಲೇಜಿಗೆ ಬರಲು ತೊಂದರೆಯಾಗಿದೆ. ಚಿತ್ತಾಪುರದಿಂದ ಕಲಬುರಗಿಗೆ ಶಹಾಬಾದ್ ಮಾರ್ಗವಾಗಿ, ಸೇಡಂ ನಗರಕ್ಕೆ ಮಳಖೇಡ ಮಾರ್ಗವಾಗಿ ಬಸ್ ಸಂಚಾರ ಮುಂದುವರಿದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.