ADVERTISEMENT

ಕಲಾ ಪ್ರತಿಭೋತ್ಸವ: ರಾಜ್ಯಮಟ್ಟಕ್ಕೆ ಶ್ರೀನಿಧಿ ಪಾಟೀಲ ಆಯ್ಕೆ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2026, 7:50 IST
Last Updated 13 ಫೆಬ್ರುವರಿ 2026, 7:50 IST
<div class="paragraphs"><p>ಶ್ರೀನಿಧಿ ಪಾಟೀಲ</p></div>

ಶ್ರೀನಿಧಿ ಪಾಟೀಲ

   

ಕಲಬುರಗಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೆಂಗಳೂರಿನ ಜೆ.ಸಿ ರಸ್ತೆಯಲ್ಲಿರುವ ಕನ್ನಡ ಭವನದಲ್ಲಿ ನಡೆಯಲಿರುವ ರಾಜ್ಯಮಟ್ಟದ ಕಲಾ ಪ್ರತಿಭೋತ್ಸವಕ್ಕೆ ಕಲಬುರಗಿಯ ಶ್ರೀನಿಧಿ ಮಹಾಂತೇಶ ಪಾಟೀಲ ಜಾನಪದ ಗೀತೆ ಗಾಯನ ವಿಭಾಗದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.

ಕಳೆದ ಡಿ.18 ಮತ್ತು 19ರಂದು ಕಲಬುರಗಿಯಲ್ಲಿ ನಡೆದಿದ್ದ ವಲಯ ಮಟ್ಟದ ಕಲಾ ಪ್ರತಿಭೋತ್ಸವದಲ್ಲಿ ಶ್ರೀನಿಧಿ ಪ್ರಥಮ ಸ್ಥಾನ ಪಡೆದಿದ್ದರು. ಹಾಗಾಗಿ, ಫೆ.13 ಮತ್ತು 14ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕಲಾ ಪ್ರತಿಭೋತ್ಸವದಲ್ಲಿ ಶ್ರೀನಿಧಿ ಪಾಲ್ಗೊಳ್ಳುತ್ತಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.