
ಪ್ರಜಾವಾಣಿ ವಾರ್ತೆ
ಚಿಂಚೋಳಿ: ‘ತಾಲ್ಲೂಕಿನ ಚಿಮ್ಮನಚೋಡ ಗ್ರಾಮದ ಸಂಗಮೇಶ್ವರರ 75ನೇ ಜಾತ್ರಾ ಮಹೋತ್ಸವದ ಪ್ರಯುಕ್ತ ಭಾನುವಾರ ಸಂಜೆ 6 ಗಂಟೆಗೆ ರಥೋತ್ಸವ ನಡೆಯಲಿದೆ’ ಎಂದು ಸಮಿತಿ ಅಧ್ಯಕ್ಷ ಸಂಗಾರೆಡ್ಡಿ ನರಸನ್ ತಿಳಿಸಿದ್ದಾರೆ.
ಏ.9ರಿಂದ 13ರವರೆಗೆ ಪಲ್ಲಕ್ಕಿ ಉತ್ಸವ ನಡೆಸಿದ ಭಕ್ತರು ಏ.14ರಂದು ತೇರು ಎಳೆಯಲಿದ್ದಾರೆ. ಮುಲ್ಲಾಮಾರಿ ನದಿದಂಡೆಯಲ್ಲಿ ರಥೋತ್ಸವ ನಡೆಯಲಿದೆ. ಜಾತ್ರೆ ಅಂಗವಾಗಿ ನಿಜಗುಣಾರೂಢ ನಾಟ್ಯಸಂಘ ಚಿಮ್ಮನಚೋಡ ವತಿಯಿಂದ ‘ಜಮೀನ್ದಾರ ಮನೆತನ’ ನಾಟಕ ಏ.14 ಮತ್ತು 15ರಂದು ರಾತ್ರಿ ಪ್ರದರ್ಶನಗೊಳ್ಳಲಿದೆ. ಜಾತ್ರಾ ಮಹೋತ್ಸವದಲ್ಲಿ ಸುತ್ತಲಿನ ಹಳ್ಳಿಗಳ ಸಾವಿರಾರು ಭಕ್ತರು ಪಾಲ್ಗೊಳ್ಳುವರು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.