ಪ್ರಾತಿನಿಧಿಕ ಚಿತ್ರ
– ಪ್ರಜಾವಾಣಿ ಚಿತ್ರ
ಕಲಬುರಗಿ: ಶಹಾಬಾದ್ ತಾಲ್ಲೂಕಿನ ಮುತ್ತಗಾ ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಮೂರ್ತಿ ಭಗ್ನಗೊಳಿಸಿದವರನ್ನು ಬಂಧಿಸಿ, ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಕೋಲಿ ಕಬ್ಬಲಿಗ ಎಸ್.ಟಿ. ಹೋರಾಟ ಸಮಿತಿ ನೇತೃತ್ವದಲ್ಲಿ ಕೋಲಿ ಸಮಾಜದವರು ನಗರದ ಜಗತ್ ವೃತ್ತದಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಸಿ ನಂತರ ಎಸ್ಪಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಎಸ್ಟಿ ಹೋರಾಟ ಸಮಿತಿ ರಾಜ್ಯ ಅಧ್ಯಕ್ಷ ಲಚ್ಚಪ್ಪ ಜಮಾದಾರ, ‘ಇತ್ತೀಚೆಗೆ ಎಲ್ಲೆಡೆ ಮಹಾನ್ ನಾಯಕರಿಗೆ ಅವಮಾನ ಮಾಡುವ, ನಿಂದನೆ ಮಾಡುವ ಪ್ರಯತ್ನ ನಡೆಯುತ್ತಿವೆ. ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳದಿದ್ದರೆ, ನಾವೇ ತಕ್ಕ ಉತ್ತರ ನೀಡಬೇಕಾಗುತ್ತದೆ. ತಕ್ಷಣ ಆರೋಪಿಗಳನ್ನು ಬಂಧಿಸಿ, ಕಠಿಣ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ಕಲಬುರಗಿ ಬಂದ್‌ಗೆ ಕರೆ ನೀಡಲಾಗುವುದು’ ಎಂದು ಎಚ್ಚರಿಸಿದರು.
ನಗರದ ಜಗತ್ ವೃತ್ತದಲ್ಲಿ ಸೇರಿದ ಕೋಲಿ ಸಮುದಾಯದ ನೂರಾರು ಜನರು ಸೇರಿ ಟೈರ್‌ಗೆ ಬೆಂಕಿ ಹಚ್ಚಿ, ಕಿಡಿಗೇಡಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬೇಡಿಕೆಗಳ ಮನವಿ ಪತ್ರವನ್ನು ಎಸ್ಪಿ ಅಡ್ಡೂರು ಶ್ರೀನಿವಾಸುಲು ಅವರಿಗೆ ಸಲ್ಲಿಸಲಾಯಿತು. ಮುಖಂಡರಾದ ರಾಮಲಿಂಗ ನಾಟೀಕಾರ, ಮಲ್ಲಿಕಾರ್ಜುನ ಗುಡಬಾ, ಶಂಕು ಮ್ಯಾಕೇರಿ, ನಾಗೇಂದ್ರಪ್ಪ ಲಿಂಗಪಳ್ಳಿ, ಶಿವು ಧಣಿ, ಭೀಮಾಶಂಕರ ಮರತೂರ, ಸಂತೋಷ ಬೆಣ್ಣೂರ, ಶಿವಕುಮಾರ ಹೊನಗುಂಟಿ, ಶಾಂತಪ್ಪ ಕೂಡಿ, ದುಂಡಪ್ಪ ಜಮಾದಾರ, ಶರಣಬಸಪ್ಪ ತಳವಾರ, ಸತೀಶ ತೆಗ್ಗೆಳ್ಳಿ, ಸಿದ್ದಪ್ಪ ಸಿನ್ನೂರ, ದಶರಥ ತೆಗನೂರ, ಸಿದ್ದಪ್ಪ ಕುಸನೂರ, ಮಲ್ಲು ಜಮಾದಾರ, ಸಿದ್ದು ತಳವಾರ
ನೇತೃತ್ವ ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.