ADVERTISEMENT

ಕಲಬುರಗಿ: ಮುಂದುವರಿದ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2025, 6:30 IST
Last Updated 13 ಆಗಸ್ಟ್ 2025, 6:30 IST
<div class="paragraphs"><p>ಕಲಬುರಗಿಯಲ್ಲಿ ಬುಧವಾರವೂ ಆಶಾ ಕಾರ್ಯಕರ್ತೆಯರ ಧರಣಿ ಮುಂದುವರಿದಿರುವುದು</p></div>

ಕಲಬುರಗಿಯಲ್ಲಿ ಬುಧವಾರವೂ ಆಶಾ ಕಾರ್ಯಕರ್ತೆಯರ ಧರಣಿ ಮುಂದುವರಿದಿರುವುದು

   

ಕಲಬುರಗಿ: ರಾಜ್ಯ ಸರ್ಕಾರ ಭರವಸೆ ನೀಡಿದಂತೆ ಮಾಸಿಕ ₹10 ಸಾವಿರ ಗೌರವಧನ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಎಐಯುಟಿಯುಸಿ ಕಾರ್ಮಿಕ ಸಂಘಟನೆ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಮಂಗಳವಾರ ಆರಂಭಿಸಿರುವ ಅಹೋರಾತ್ರಿ ಧರಣಿ ಬುಧವಾರವೂ ಮುಂದುವರಿದಿದೆ.

ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನ ಐವಾನ್ ಎ ಶಾಹಿ ರಸ್ತೆಯಲ್ಲಿ ಸಂಚಾರ ಸ್ಥಗಿತಗೊಳಿಸಿ ಧರಣಿ ನಡೆಯುತ್ತಿದ್ದಾರೆ.

ADVERTISEMENT

ಅಹೋರಾತ್ರಿ ಧರಣಿ ಹಮ್ಮಿಕೊಂಡಿರುವ ಆಶಾ‌ ಕಾರ್ಯಕರ್ತೆಯರು ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಸಿಲುಕಿ ಕಷ್ಟ ಎದುರಿಸಿದರು.

ಬಳಿಕ ನೆಲಕ್ಕೆ ಹಾಸಿದ್ದ ತಾಡಾಪಾಲ್ ಅನ್ನು ‌ಹೊದ್ದು ಮಳೆಯಿಂದ ರಕ್ಷಣೆ ‌ಪಡೆದರು.

ಬುಧವಾರ ಬೆಳಿಗ್ಗೆಯಿಂದಲೇ ಮತ್ತೆ ಧರಣಿ ಸ್ಥಳದಲ್ಲಿ ‌ಜಮಾಯಿಸಿ, ಸರ್ಕಾರದ‌ ವಿರುದ್ಧ ಘೋಷಣೆ ಕೂಗಿದರು. ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಕಲಬುರಗಿ ನಗರ ಸೇರಿದಂತೆ ಆಳಂದ, ಅಫಜಲಪುರ, ಜೇವರ್ಗಿ, ಸೇಡಂ, ಚಿತ್ತಾಪುರ, ಚಿಂಚೋಳಿ, ಕಾಳಗಿ, ಕಮಲಾಪುರ, ಆಳಂದ, ಯಡ್ರಾಮಿ, ಶಹಾಬಾದ್ ತಾಲ್ಲೂಕಿನಿಂದ ನೂರಾರು ಸಂಖ್ಯೆಯಲ್ಲಿ ಬಂದಿರುವ ಆಶಾ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

ಧರಣಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

‘ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರ ಸಂಘದ ಮುಖಂಡರನ್ನು ಭೇಟಿ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಸಿಕ ಗೌರವ ಧನ ₹ 10 ಸಾವಿರವನ್ನು ಏಪ್ರಿಲ್‌ 1ರಿಂದಲೇ ಅನ್ವಯವಾಗುವಂತೆ ಮಂಜೂರು ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ, ತಮ್ಮ ಮಾತು ತಪ್ಪಿದ್ದಾರೆ. ಹೀಗಾಗಿ, ಆ ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ’ ಎಂದು ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ವಿ.ಜಿ.ದೇಸಾಯಿ ಪುನರ್ ಉಚ್ಚರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.