ಕಲಬುರಗಿಯಲ್ಲಿ ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಅಮಿತ್ ಶಾ ಅವರ ಪ್ರತಿಕೃತಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು
ಕಲಬುರಗಿ: ಸಂಸತ್‌ನಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ ವಿವಿಧ ಸಂಘಟನೆಗಳ ಮುಖಂಡರು ಮಂಗಳವಾರ ಕಲಬುರಗಿ ಬಂದ್‌ಗೆ ಕರೆ ನೀಡಿದ್ದು, ಈ ವೇಳೆ ಅಮಿತ್ ಶಾ ಅವರ ಪ್ರತಿಕೃತಿಯನ್ನು ಸುಟ್ಟು ಹಾಕಿದರು.
ದಲಿತ ಸಂಘಟನೆಗಳ ಮುಖಂಡರು, ಪ್ರತಿಭಟನಾಕಾರರು ಕೇಂದ್ರ ಬಸ್ ನಿಲ್ದಾಣದಲ್ಲಿ ಜಮಾಯಿಸಿದರು. ಹತ್ತಾರು ಟೈರ್‌ಗಳಿಗೆ ಬೆಂಕಿ ಹಚ್ಚಿದರು. ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.
ಅಮಿತ್ ಶಾ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನಕಾರರು, ಶಾ ಭಾವಚಿತ್ರ ಹಾಗೂ ಪ್ರತಿಕೃತಿಗೆ ಚಪ್ಪಲಿ ಏಟು ನೀಡಿದರು ಹಾಗೂ ಕೊನೆಯಲ್ಲಿ ಪ್ರತಿಕೃತಿಯನ್ನು ಸುಟ್ಟು ಹಾಕಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.