ADVERTISEMENT

ಕಲಬುರಗಿ: ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಅಳವಡಿಸಿದ್ದ ಬ್ಯಾನರ್, ಭಗವಾಧ್ವಜ ತೆರವು

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2025, 7:11 IST
Last Updated 18 ಅಕ್ಟೋಬರ್ 2025, 7:11 IST
<div class="paragraphs"><p>ಭಗವಾಧ್ವಜ ತೆರವು</p></div>

ಭಗವಾಧ್ವಜ ತೆರವು

   Prithvi

ಚಿತ್ತಾಪುರ: ಇದೇ 19ರಂದು ಭಾನುವಾರ ಪಟ್ಟಣದಲ್ಲಿ ಪಥ ಸಂಚಲನ ಕಾರ್ಯಕ್ರಮ ಆಯೋಜನೆ ಮಾಡಿದ ಆರ್‌ಎಸ್‌ಎಸ್‌ ಕಾರ್ಯಕರ್ತರು ಮುಖ್ಯ ಬೀದಿಗಳಲ್ಲಿ ಅಳವಡಿಸಿದ್ದ ಬಂಟಿಂಗ್ಸ್, ಭಗವಾಧ್ವಜ ಮತ್ತು ಕಟೌಟ್‌ಗಳನ್ನು ಶುಕ್ರವಾರ ರಾತ್ರಿ ಪುರಸಭೆ ಆಡಳಿತವು ಪೊಲೀಸ್ ಬಿಗಿ ಭದ್ರತೆಯಲ್ಲಿ ತೆರವುಗೊಳಿಸಿದೆ.

ಬ್ಯಾನರ್ ಮತ್ತು ಕಟೌಟ್ ತೆರವು ಮಾಡುತ್ತಿರುವ ವಿಷಯ ತಿಳಿಯುತ್ತಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಲಾಡ್ಜಿಂಗ್ ಕ್ರಾಸ್‌ಗೆ ದೌಡಾಯಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಪಥ ಸಂಚಲನಕ್ಕೆ ಅನುಮತಿ ಕೋರಿ ಬಂದಿರುವ ಅರ್ಜಿ ಕುರಿತು ವರದಿ ನೀಡುವಂತೆ ತಹಶೀಲ್ದಾರ್ ಅವರು ಪೊಲೀಸ್ ಇಲಾಖೆಗೆ ಪತ್ರ ಬರೆದಿದ್ದಾರೆ. ಹೀಗಾಗಿ ಇನ್ನೂ ತಾಲೂಕು ಆಡಳಿತದಿಂದ ಪಥಸಂಚಲನ ಕಾರ್ಯಕ್ರಮ ನಡೆಸಲು ಅಧಿಕೃತವಾಗಿ ಅನುಮತಿ ನೀಡಿಲ್ಲ ಎಂದು ತಿಳಿದು ಬಂದಿದೆ.

ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಕಾರ್ಯಕ್ರಮಗಳನ್ನು ನಿಷೇಧ ಮಾಡಬೇಕು ಎಂದು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ಚಿತ್ತಾಪುರ ಕ್ಷೇತ್ರವನ್ನು ವಿಧಾನಸಭೆಯಲ್ಲಿ ಪ್ರತಿನಿಧಿಸುತ್ತಿದ್ದಾರೆ.

ಹೀಗಾಗಿ ಪಟ್ಟಣದಲ್ಲಿ ಪಥ ಸಂಚಲನ ಯಶಸ್ವಿಗೊಳಿಸಲು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಬಿಜೆಪಿ ಶತಾಯಗತಾಯ ಯತ್ನಿಸುತ್ತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.