ಕಲಬುರಗಿ: ಇಲ್ಲಿನ ಕಲಬುರಗಿ ಮತ್ತು ಬೆಂಗಳೂರು ನಡುವೆ ಏಪ್ರಿಲ್ 16ರಿಂದ ಸ್ಟಾರ್ ಏರ್ ವಿಮಾನವು ನಿತ್ಯ ಸಂಚರಿಸಲಿದೆ ಎಂದು ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಶರಣು ಪಪ್ಪಾ ಮತ್ತು ಗೌರವ ಕಾರ್ಯದರ್ಶಿ ಶಿವರಾಜ ವಿ. ಇಂಗನಶೆಟ್ಟಿ ಹೇಳಿದ್ದಾರೆ.
ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ ಮೋಹನ ನಾಯ್ಡು, ಸಂಸದ ರಾಧಾಕೃಷ್ಣ ದೊಡ್ಡಮನಿ ಅವರ ಪ್ರಯತ್ನದಿಂದ ರಾಜಧಾನಿಗೆ ನಿತ್ಯ ವಿಮಾನ ಸೇವೆ ಸಿಗಲಿದೆ. ಇದರಿಂದ ಕಲಬುರಗಿ ಹಾಗೂ ಸುತ್ತಲಿನ ಜಿಲ್ಲೆಗಳ ಪ್ರಯಾಣಿಕರಿಗೆ ಅನುಕೂಲ ಆಗಲಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.
ವ್ಯಾಪಾರ ಮತ್ತು ಧಾರ್ಮಿಕ ಕ್ಷೇತ್ರಗಳ ಹಿನ್ನೆಲೆಯಲ್ಲಿ ದೆಹಲಿ ಮತ್ತು ತಿರುಪತಿ ನಡುವೆ ಮತ್ತೆ ನಿತ್ಯ ವಿಮಾನ ಸಂಚಾರ ಆರಂಭವಾಗಬೇಕು. ಮುಂಬೈ, ಅಹಮದಾಬಾದ್, ರಾಜಸ್ಥಾನದ ಕಿಶನ್‌ಗಢ ಮತ್ತು ಗೋವಾಕ್ಕೂ ವಿಮಾನ ಸೇವೆ ವಿಸ್ತರಿಸಬೇಕು ಎಂದು ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.