ವಂದೇ ಭಾರತ್ ಸ್ಲೀಪರ್ ಕೋಚ್ ರೈಲು
ಕಲಬುರಗಿ: ಕಲಬುರಗಿ–ಬೆಂಗಳೂರು ಮಧ್ಯೆ ಸಂಚರಿಸುತ್ತಿರುವ ವಂದೇ ಭಾರತ್ ರೈಲಿನ ಸಮಯವನ್ನು 2026ರ ಜನವರಿ 1ರಿಂದ ಅನ್ವಯವಾಗುವಂತೆ ದಕ್ಷಿಣ ಮಧ್ಯ ರೈಲ್ವೆಯು ಬದಲಾಯಿಸಿದ್ದು, ಕಲಬುರಗಿಯಿಂದ ಬೆಳಿಗ್ಗೆ 5.15ರ ಬದಲು ಬೆಳಿಗ್ಗೆ 6.10ಕ್ಕೆ ಹೊರಟು ಮಧ್ಯಾಹ್ನ 2.10ಕ್ಕೆ ಬೆಂಗಳೂರು ತಲುಪಲಿದೆ.
ಪ್ರಯಾಣಿಕರ ಕೋರಿಕೆ ಮೇರೆಗೆ ಸತ್ಯಸಾಯಿ ಪ್ರಶಾಂತಿ ನಿಲಯಂ (ಪುಟ್ಟಪರ್ತಿ)ನಲ್ಲಿ ನಿಲುಗಡೆ ನೀಡಲಿದೆ.
ಬೆಳಿಗ್ಗೆ 6.10ಕ್ಕೆ ಕಲಬುರಗಿಯಿಂದ ಹೊರಡುವ ರೈಲು ವಾಡಿ, ಯಾದಗಿರಿ, ರಾಯಚೂರು, ಮಂತ್ರಾಲಯಂ ರೋಡ್, ಗುಂತಕಲ್, ಅನಂತಪುರ, ಧರ್ಮಾವರಂ, ಸತ್ಯಸಾಯಿ ಪ್ರಶಾಂತಿ ನಿಲಯಂ, ಯಲಹಂಕ ಮೂಲಕ ಸಾಗಿ ಮಧ್ಯಾಹ್ನ 2.10ಕ್ಕೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ತಲುಪಲಿದೆ.
ಮಧ್ಯಾಹ್ನ 2.40ಕ್ಕೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ರಾತ್ರಿ 10.45ಕ್ಕೆ ಕಲಬುರಗಿ ತಲುಪಲಿದೆ. ಈ ಮುಂಚೆ ರಾತ್ರಿ 11.30ಕ್ಕೆ ತಲಪುತ್ತಿತ್ತು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.