
ಕಲಬುರಗಿ: ಜಿಲ್ಲೆಗೆ ಸಂಬಂಧಿಸಿದಂತೆ ಮುಂಬರುವ ಬಜೆಟ್‌ನಲ್ಲಿ ರಸ್ತೆ, ಕುಡಿಯುವ ನೀರು ಮುಂತಾದ ಮಹತ್ತರ ಕಾರ್ಯಕ್ರಮಗಳನ್ನು ಸೇರಿಸುವ ಸಲುವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಜಿಲ್ಲಾ ಶಾಸಕರೊಂದಿಗೆ ಬಜೆಟ್ ಪೂರ್ವ ಸಭೆ ನಡೆಸಿದರು. ಮೂಲಸೌಲಭ್ಯಗಳು ಸೇರಿದಂತೆ ಕೆಲವು ಶಾಶ್ವತ ಕಾಮಗಾರಿಗಳನ್ನು ತೆಗೆದುಕೊಳ್ಳಲು ಶಾಸಕರು ಹಲವಾರು ಸಲಹೆಗಳನ್ನು ನೀಡಿದರು.
ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಭಿವೃದ್ಧಿ ಅಧ್ಯಕ್ಷ ಡಾ.ಅಜಯ್ ಸಿಂಗ್, ಶಾಸಕರಾದ ಅಲ್ಲಮಪ್ರಭು ಪಾಟೀಲ, ಎಂ.ವೈ.ಪಾಟೀಲ, ಬಿ.ಆರ್.ಪಾಟೀಲ, ಖನಿಜಾ ಫಾತಿಮಾ, ಚಂದ್ರಶೇಖರ ಪಾಟೀರ, ಜಗದೇವ ಗುತ್ತೇದಾರ, ತಿಪ್ಪಣ್ಣಪ್ಪ ಕಮಕನೂರ ಸಭೆಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.