ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ದೇವಲ ಗಾಣಗಾಪುರದಲ್ಲಿ ಶನಿವಾರ ದತ್ತ ಜಯಂತಿ ನಿಮಿತ್ತ ದತ್ತಾತ್ರೇಯ ಮಹಾರಾಜರ ತೊಟ್ಟಿಲೋತ್ಸವ ಕಾರ್ಯಕ್ರಮವು ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ಜರುಗಿತು. ತೊಟ್ಟಿಲೋತ್ಸವ ಸಮಾರಂಭವನ್ನು ಕಣ್ತುಂಬಿಕೊಳ್ಳಲು ಅಪಾರ ಸಂಖ್ಯೆಯಲ್ಲಿ ಭಕ್ತರು ಗಾಣಗಾಪುರಕ್ಕೆ ಬಂದಿದ್ದರು. ಕರ್ನಾಟಕ ಸೇರಿದಂತೆ ನೆರೆಯ ಮಹಾರಾಷ್ಟ್ರ, ತೆಲಂಗಾಂಣ, ಆಂಧ್ರಪ್ರದೇಶ, ದೂರದ ಗುಜರಾತ್, ಗೋವಾದಿಂದಲೂ ಭಕ್ತರು ಬಂದಿದ್ದರು. ಅಫಜಲಪುರ, ಚೌಡಾಪುರ, ಆನೂರ ಮಾರ್ಗದಲ್ಲಿ ಭಕ್ತರಿಗಾಗಿ ಅಲ್ಲಲ್ಲಿ ಪ್ರಸಾದ ವಿತರಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.