ಕಲಬುರಗಿ: ಮಾಜಿ ದೇವದಾಸಿ ಮಹಿಳೆಯರ, ದೇವರ ಹೆಸರಿನ ಮೇಲಿರುವ ಸ್ತ್ರೀ ಹಾಗೂ ಪುರುಷರ ಗಣತಿ ಮಾಡಬೇಕು ಎಂದು ಆಗ್ರಹಿಸಿ ಭೀಮಪುತ್ರ ಬ್ರಿಗೇಡ್ ಸಾಮಾಜಿಕ ಸಂಘಟನೆಯ ಜಿಲ್ಲಾ ಸಮಿತಿ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಮಾಜಿ ದೇವದಾಸಿ ಮಹಿಳೆಯರಿಗೆ ಹಾಗೂ ದೇವರ ಹೆಸರಿನ ಮೇಲಿರುವ ಸ್ತ್ರೀ ಹಾಗೂ ಪುರುಷರಿಗೆ ಸರ್ಕಾರದ ಸೌಲಭ್ಯಗಳು ಸರಿಯಾಗಿ ಸಿಗುತ್ತಿಲ್ಲ. ಅವರನ್ನೂ ಗಣತಿ ಮಾಡಿದರೆ ಸರ್ಕಾರದ ಯೋಜನೆಗಳು ತಲುಪಿಸಲು ನೆರವಾಗುತ್ತದೆ ಎಂದರು.
ಪ್ರತಿಯೊಬ್ಬರ ಮನೆಗೆ ತೆರಳಿ ಗಣತಿ ಮಾಡಿ, ಪ್ರಮಾಣ ಪತ್ರವನ್ನು ನೀಡಬೇಕು. ಇಲ್ಲದಿದ್ದರೆ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಪ್ರತಿಭಟನಕಾರರು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಸಮಿತಿಯ ಪದಾಧಿಕಾರಿಗಳಾದ ಸಾಯಬಣ್ಣ ಸಾಮಗೋಳ, ಜಗದೇವಿ, ರಾಜಕುಮಾರ ಚವ್ಹಾಣ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.