ಕಲಬುರಗಿಯಲ್ಲಿ ಜನಾಗ್ರಹ ವೇದಿಕೆಯಡಿ ಬುಧವಾರ ಪ್ರತಿಭಟನೆ ನಡೆಯಿತು
ಕಲಬುರಗಿ: 'ಧರ್ಮಸ್ಥಳ ಕ್ಷೇತ್ರದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಿಬಿಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಎಸ್‌ಐಟಿಯಿಂದ ಪಾರದರ್ಶಕ ತನಿಖೆ ನಡೆಸಬೇಕು' ಎಂದು ಆಗ್ರಹಿಸಿ ಧರ್ಮಸ್ಥಳ ಭಕ್ತಾಭಿಮಾನಿ ವೇದಿಕೆ ವತಿಯಿಂದ ನಗರದಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಯಿತು.
ನಗರದ ಜಗತ್ ವೃತ್ತದಲ್ಲಿ ಜಮಾಯಿಸಿದ ವಿವಿಧ ಸಮಾಜ ಸಂಘಟನೆಗಳ ಮುಖಂಡರು, ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದ ತನಕ ಪ್ರತಿಭಟನೆ ನಡೆಸಿದರು.
ಬಿಜೆಪಿ ಮುಖಂಡರಾದ ದತ್ತಾತ್ರೇಯ ಪಾಟೀಲ ರೇವೂರ, ರಾಜಕುಮಾರ ಪಾಟೀಲ ತೇಲ್ಕೂರ, ದಿವ್ಯಾ ಹಾಗರಗಿ ಸೇರಿದಂತೆ ಹಲವು ಬಿಜೆಪಿ ಮುಖಂಡರು ಹಾಗೂ ಧರ್ಮಸ್ಥಳ ಸಂಘದ ನೂರಾರು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.