ADVERTISEMENT

ಕಲಬುರಗಿ | ಕೌಟುಂಬಿಕ ಕಲಹ: ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2025, 11:34 IST
Last Updated 29 ಡಿಸೆಂಬರ್ 2025, 11:34 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಕಲಬುರಗಿ: ಕೌಟುಂಬಿಕ ಕಲಹ ಹಿನ್ನೆಲೆ ವ್ಯಕ್ತಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ್ದಾರೆ‌.

ADVERTISEMENT

ನಗರದ ಶಿವಶಕ್ತಿ ನಗರದಲ್ಲಿ ಸೋಮವಾರ ಈ ಅವಘಡ ನಡೆದಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ಖಂಡುರಾಜ್ ದಾಲವಾಜಿ (45) ಎಂದು ಗುರುತಿಸಲಾಗಿದೆ.

ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿರುವ ಖಂಡುರಾಜ್ ಹಲವು ವರ್ಷಗಳಿಂದ ದುಬೈನಲ್ಲಿ ಕೆಲಸ ಮಾಡುತ್ತಿದ್ದರು‌ ಎಂದು ಮೂಲಗಳು ತಿಳಿಸಿವೆ.

ಕಳೆದ ಹಲವು ದಿನಗಳ ಹಿಂದೆ ವಾಪಸ್ ಮನೆಗೆ ಬಂದಿದ್ದ ಖಂಡುರಾಜ್ ಭಾನುವಾರ ರಾತ್ರಿ ಹೆಂಡತಿ ಜೊತೆ ಜಗಳ ಮಾಡಿಕೊಂಡಿದ್ದರು. ಇದರಿಂದ ಮನನೊಂದ ಹೆಂಡತಿ ಖಂಡುರಾಜ್ ವಿರುದ್ಧ ಮಹಿಳಾ ಪೋಲಿಸ್ ಠಾಣೆಗೆ ದೂರು ನೀಡಿದ್ದರು.

ಘಟನ ನಡೆದ ಸ್ಥಳಕ್ಕೆ ಚೌಕ್ ಪೊಲೀಸ್ ಠಾಣೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.